ಭಾನುವಾರ, ಡಿಸೆಂಬರ್ 8, 2019
20 °C

ಮೋದಿ ನುಡಿದಂತೆ ನಡೆದಿದ್ದಾರೆ; ಇದು ಪಾಕಿಸ್ತಾನಕ್ಕೆ ಎಚ್ಚರಿಕೆ ಗಂಟೆ -ಸದಾನಂದ ಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನುಡಿದಂತೆ ನಡೆದಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಹೇಳಿದ್ದಾರೆ.‌

ಪಾಕಿಸ್ತಾನದ ಬಲಾಕೋಟ್‌ ಸೇರಿದಂತೆ ಪಾಕ್‌ ಆಕ್ರಮಿತ ಪ್ರದೇಶಗಳಲ್ಲಿರುವ ಉಗ್ರರ ನೆಲೆಗಳ ಮೇಲೆ ವಾಯುಪಡೆ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯಿಸಿದ್ದಾರೆ.

ಏನು ಮಾಡಬೇಕಿತ್ತೋ ಅದನ್ನು ನಮ್ಮ ಸೇನೆ ಮಾಡಿದೆ. ಯೋಧರ ಒಂದೊಂದು ಹನಿ ರಕ್ತಕ್ಕೂ ನ್ಯಾಯ ಒದಗಿಸುತ್ತೇನೆಂದು ಪ್ರಧಾನಿ ಹೇಳಿದ್ದರು. ಈ ನಿಟ್ಟಿನಲ್ಲಿ ಸೇನೆ ದಿಟ್ಟ ಹೆಜ್ಜೆಯನ್ನು ಇಟ್ಟಿದೆ. ಮೋದಿ ಅವರು ನುಡಿದಂತೆ ನಡೆದಿದ್ದಾರೆ. ಉಗ್ರ ತರಬೇತಿ ಕೇಂದ್ರಗಳು ಧ್ವಂಸ ಆಗಿವೆ ಎಂದು ತಿಳಿಸಿದ್ದಾರೆ.

ದೇಶದ ಶಕ್ತಿ ಪರೀಕ್ಷೆ ಮಾಡುವ ಪಾಕಿಸ್ತಾನದ ಪ್ರಯತ್ನ ಸಾಧ್ಯವಾಗುವುದಿಲ್ಲ. ಭಾರತ ಎಲ್ಲದಕ್ಕೂ ತಯಾರಾಗಿದೆ. ಆದರೆ ಭಯೋತ್ಪಾದನೆಯನ್ನು ಮಾತ್ರ ಹತ್ತಿಕ್ಕುವ ಕೆಲಸ ಮಾಡುತ್ತಿದ್ದೇವೆ ಎಂಬ ಸಂದೇಶವನ್ನು ಮೋದಿ ಕೊಟ್ಟಿದ್ದಾರೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆ ಗಂಟೆ ಎಂದು ಗುಡುಗಿದರು.

ಈ ವಿಚಾರದಲ್ಲಿ ರಾಜಕೀಯ ಮಾಡುವುದು ಸೂಕ್ತವಲ್ಲ. ಹಿಂದೆ ಯಾರು ಏನು ಮಾಡಿದ್ದರೂ ಪಾಕಿಸ್ತಾನವನ್ನು ಹೆಡೆಮುರಿ‌ ಕಟ್ಟುವ ಕೆಲಸ ಆಗಿರಲಿಲ್ಲ. ಸದ್ಯದ ಕಾಲಘಟ್ಟಕ್ಕೆ ಏನು ಬೇಕೋ ಅದನ್ನು‌ ಮಾಡಿದ್ದೇವೆ. ಕಾಂಗ್ರೆಸ್ ನಾಯಕರಿಗೂ ಪಾಕಿಸ್ತಾನಕ್ಕೂ ಏನು ಸಂಬಂಧವಿದೆಯೋ ಗೊತ್ತಿಲ್ಲ. ಇದರಲ್ಲಿ ರಾಜಕಾರಣ ಮಾಡುತ್ತಾರೆ ಅಂದರೆ ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

ಪಾಕಿಸ್ತಾನಕ್ಕೆ ಈಗಲೂ ಬುದ್ದಿ ಬರದಿದ್ದರೆ ಯುದ್ಧದ ಹಂತಕ್ಕೆ ಹೋಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು