ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಗರಮಾಲಾ ಯೋಜನೆಗೆ ವಿರೋಧ: 16ಕ್ಕೆ ಕಾರವಾರ ಬಂದ್‌

ಶಾಸಕಿ, ಸಂಸದರ ಭಾವಚಿತ್ರಗಳಿಗೆ ಸೆಗಣಿ ಎರಚಿ ಆಕ್ರೋಶ
Last Updated 15 ಜನವರಿ 2020, 1:47 IST
ಅಕ್ಷರ ಗಾತ್ರ

ಕಾರವಾರ: ‘ಸಾಗರಮಾಲಾ’ ಯೋಜನೆಯಡಿ ನಗರದ ವಾಣಿಜ್ಯ ಬಂದರಿನ ವಿಸ್ತರಣೆ ಕಾಮಗಾರಿಯನ್ನು ವಿರೋಧಿಸಿ ಸ್ಥಳೀಯ ಮೀನುಗಾರರು ಮಂಗಳವಾರವೂ ಧರಣಿ, ಪ್ರತಿಭಟನೆ ಮುಂದುವರಿಸಿದರು. ಅಲ್ಲದೇ ಜ.16ರಂದು ಕಾರವಾರ ಬಂದ್‌ಗೆ ಕರೆ ನೀಡಿ, ಭಟ್ಕಳದಿಂದ ಕಾರವಾರದವರೆಗೆ ಮೀನುಗಾರಿಕೆ ಸ್ಥಗಿತಗೊಳಿಸಲು ನಿರ್ಧರಿಸಿದರು.

ಮೀನು ಮಾರುಕಟ್ಟೆಯಲ್ಲಿ ಕೆಲಸ ಸ್ಥಗಿತಗೊಳಿಸಿದ ನೂರಾರು ಮೀನುಗಾರ ಮಹಿಳೆಯರು, ಯೋಜನಾ ಪ್ರದೇಶದ ಸಮೀಪ ಬೆಳಿಗ್ಗೆಯೇ ಸೇರಿದರು. ಸಂಸದ ಅನಂತಕುಮಾರ ಹೆಗಡೆ ಮತ್ತು ಸ್ಥಳೀಯ ಶಾಸಕಿ ರೂಪಾಲಿ ನಾಯ್ಕ ವಿರುದ್ಧ ಘೋಷಣೆ ಕೂಗಿ, ಅವರ ಭಾವಚಿತ್ರಗಳಿಗೆ ಸಗಣಿ ಮೆತ್ತಿ, ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕಿದರು.

‘ಮೀನುಗಾರರ ಹಿತಾಸಕ್ತಿಗಳಿಗೆ ಧಕ್ಕೆಯಾಗುವಂಥ ಯಾವುದೇ ಯೋಜನೆಗಳನ್ನು ಜಾರಿ ಮಾಡುವುದಿಲ್ಲ ಎಂದು ಇಬ್ಬರೂ ಭರವಸೆ ನೀಡಿದ್ದರು. ಆದರೆ, ಈಗ ಬಂದರು ವಿಸ್ತರಣೆಗೆ ಅಲೆ ತಡೆಗೋಡೆ ನಿರ್ಮಿಸಲಾಗುತ್ತಿದೆ. ಇಬ್ಬರನ್ನೂ ನಂಬಲಾಗದು’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಘೋಷಣೆ ಕೂಗುತ್ತ ಜಿಲ್ಲಾಧಿಕಾರಿ ಕಚೇರಿಯ ಬಳಿ ಸೇರಿದರು. ಪುರುಷರ ಉಡುಗೆಯಲ್ಲಿ ಶಾಸಕಿ ರೂಪಾಲಿ ನಾಯ್ಕ ಹಾಗೂ ಸಂಸದ ಅನಂತಕುಮಾರ ಹೆಗಡೆ ಸೀರೆ ಉಟ್ಟಿರುವಂತೆ ಮಾರ್ಪಡಿಸಿದ ಭಾವಚಿತ್ರಗಳನ್ನಿರಿಸಿಕೊಂಡು ತಮ್ಮ ಧರಣಿ ಮುಂದುವರಿಸಿದರು. ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಯಲ್ಲಿ ಸುಮಾರು 2 ತಾಸು ಮೀನುಗಾರರು ಧರಣಿ ಕುಳಿತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT