ಶುಕ್ರವಾರ, ಫೆಬ್ರವರಿ 28, 2020
19 °C

‘ಸರ್ಕಾರ ಹಣ ನೀಡಿದರಷ್ಟೇ ಸಾಹಿತ್ಯ ಸಂಭ್ರಮ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ‘ರಾಜ್ಯ ಸರ್ಕಾರವು ಅನುದಾನ ನೀಡುವುದಾಗಿ ಭರವಸೆ ನೀಡಿದರೆ ಮಾತ್ರ ಈ ವರ್ಷದ ಧಾರವಾಡ ಸಾಹಿತ್ಯ ಸಂಭ್ರಮವನ್ನು ಆಯೋಜಿಸುತ್ತೇವೆ’ ಎಂದು ಸಂಭ್ರಮದ ಸಂಘಟಕರಲ್ಲೊಬ್ಬರಾದ ಸಾಹಿತಿ ರಾಘವೇಂದ್ರ ಪಾಟೀಲ ಹೇಳಿದರು.

ಸೋಮವಾರ ನಗರಕ್ಕೆ ಭೇಟಿ ನೀಡಿದ್ದ ಅವರು ‘ಪ್ರಜಾವಾಣಿ’ ಯೊಂದಿಗೆ ಮಾತನಾಡಿ, ‘ಸರ್ಕಾರ ಪ್ರತಿವರ್ಷವೂ ₹15 ಲಕ್ಷ ಬಿಡುಗಡೆ ಮಾಡುತ್ತಿತ್ತು. ಈ ಬಾರಿ ಅನುದಾನ ನೀಡುವ ಬಗ್ಗೆ ಯಾವುದೇ ಭರವಸೆ ಸಿಕ್ಕಿಲ್ಲ. ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಸರ್ಕಾರ ಹಣ ಕೊಟ್ಟರೆ ಸಂಭ್ರಮ ನಡೆಯಲಿದೆ. ಇಲ್ಲದಿದ್ದರೆ ಇಲ್ಲ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು