ಗುರುವಾರ , ನವೆಂಬರ್ 14, 2019
26 °C

ಹೊಸಕೋಟೆ: ಸಾಯಿಬಾಬಾ ದೇವಾಲಯ ಲೋಕಾರ್ಪಣೆ

Published:
Updated:
ಸಾಯಿಬಾಬಾ ಶಿಲಾ ವಿಗ್ರಹ

ಹೊಸಕೋಟೆ: ತಾಲ್ಲೂಕಿನ ನಂದಗುಡಿ ಗ್ರಾಮದಲ್ಲಿ ಶಿರಡಿ ಸಾಯಿಬಾಬಾರ ನೂತನ ವಿಗ್ರಹ ಪ್ರತಿಷ್ಠಾಪನೆ ಮತ್ತು ಕುಂಬಾಭಿಷೇಕ ಕಾರ್ಯಕ್ರಮ ಗುರುವಾರ ನಡೆಯಿತು.

ಈ ಸಂಬಂಧ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಹೋಮ ಹವನಗಳನ್ನು ಏರ್ಪಡಿಸಲಾಗಿತ್ತು. ಬಿಜೆಪಿ ಮುಖಂಡ ಬಿ.ಎನ್.ಬಚ್ಚೇಗೌಡ ಸೇರಿದಂತೆ ನೂರಾರು ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬುಧವಾರ ಸಂಜೆ ಗ್ರಾಮದ ಮುಖ್ಯ ಬೀದಿಗಳಲ್ಲಿ ಸಾಯಿಬಾಬಾ ವಿಗ್ರಹವನ್ನು ಬೆಳ್ಳಿ ರಥದಲ್ಲಿಟ್ಟು ಮೆರವಣಿಗೆ ಮಾಡಲಾಯಿತು. ಸಿದ್ದೇಶ್ವರಸ್ವಾಮಿ ಸೇವಾ ಸಮಿತಿ ಸುಮಾರು ₹40 ಲಕ್ಷ ವೆಚ್ಚದಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ದೇವಾಲಯ ನಿರ್ಮಿಸಿದೆ ಎಂದು ಸಮಿತಿ ಮುಖ್ಯಸ್ಥ ಯು.ನಂಜುಂಡಪ್ಪ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)