ಶುಕ್ರವಾರ, ಏಪ್ರಿಲ್ 3, 2020
19 °C

ಸೈನೈಡ್‌ ಮೋಹನ್‌ಗೆ ಜೀವಾವಧಿ ಶಿಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕ ಪೊಲೀಸ್‌ ಠಾಣೆ ವ್ಯಾಪ್ತಿಯ ಕೊಳ್ತಾಜೆಪಾದೆ ಗ್ರಾಮದ ಯುವತಿಯ ಮೇಲೆ ಅತ್ಯಾಚಾರ ನಡೆಸಿ, ಸೈನೈಡ್‌ ನೀಡಿ ಕೊಲೆ ಮಾಡಿದ ಪ್ರಕರಣದಲ್ಲಿ ಸರಣಿ ಹಂತಕ ಮೋಹನ್‌ ಕುಮಾರ್‌ ಅಲಿಯಾಸ್‌ ಸೈನೈಡ್‌ ಮೋಹನ್‌ಗೆ ನಗರದ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ₹ 55,000 ದಂಡ ವಿಧಿಸಿದೆ.

ಒಟ್ಟು 20 ಯುವತಿಯರನ್ನು ಮದುವೆ ಆಗುವುದಾಗಿ ನಂಬಿಸಿ, ಅವರ ಮೇಲೆ ಅತ್ಯಾಚಾರ ಎಸಗಿದ ಬಳಿಕ ಸೈನೈಡ್‌ ನೀಡಿ ಕೊಲೆ ಮಾಡಿದ ಆರೋಪ ಮೋಹನ್‌ ಮೇಲಿದೆ. ಈ ಪೈಕಿ 19 ಪ್ರಕರಣಗಳ ವಿಚಾರಣೆ ಮುಗಿದು, ನ್ಯಾಯಾಲಯದ ತೀರ್ಮಾನ ಪ್ರಕಟವಾಗಿದೆ. ಇದು ಸೈನೈಡ್‌ ಮೋಹನ್‌ ಜೀವಾವಧಿ ಶಿಕ್ಷೆಗೊಳಗಾಗಿರುವ 15ನೇ ಪ್ರಕರಣ. ನಾಲ್ಕು ಪ್ರಕರಣಗಳಲ್ಲಿ ಮರಣದಂಡನೆ ವಿಧಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು