ಭಾನುವಾರ, ಡಿಸೆಂಬರ್ 8, 2019
20 °C

ಅಗ್ನಿಶಾಮಕ, ಜೈಲು ಸಿಬ್ಬಂದಿಗೂ ವೇತನ ಹೆಚ್ಚಳ: ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಔರಾದ್ಕರ ವರದಿ ಜಾರಿ ಮೂಲಕ ಪೊಲೀಸ್‌ ಸಿಬ್ಬಂದಿ ವೇತನ ಪರಿಷ್ಕರಣೆ ಕಾರ್ಯ ನಡೆಯುತ್ತಿದೆ. ಈ ವರದಿ ಅನ್ವಯವೇ ಜೈಲು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗೂ ವೇತನ ಹೆಚ್ಚಳ ಸೇರಿದಂತೆ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಆರ್ಥಿಕ ಇಲಾಖೆ ಜತೆ ಚರ್ಚಿಸಲಾಗುವುದು’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

‘ಇಲಾಖೆಯಲ್ಲಿ 24 ಸಾವಿರ ಹುದ್ದೆಗಳು ಖಾಲಿ ಇವೆ. ಪ್ರಸಕ್ತ ವರ್ಷ 4 ಸಾವಿರ ಕಾನ್‌ಸ್ಟೆಬಲ್‌, 200 ಸಬ್ ಇನ್‌ಸ್ಪೆಕ್ಟರ್‌ಗಳ ನೇಮಕಾತಿ ನಡೆಯಲಿದೆ. ಇಲಾಖೆಯನ್ನು ಸದೃಢಗೊಳಿಸಲು ಅಗತ್ಯವಿರುವ ಸಂಪನ್ಮೂಲ, ಬದಲಾವಣೆಗೂ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು