ದಿನಗೂಲಿ ನೌಕರರ ವೇತನ ಬಿಡುಗಡೆ

7

ದಿನಗೂಲಿ ನೌಕರರ ವೇತನ ಬಿಡುಗಡೆ

Published:
Updated:

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ದಿನಗೂಲಿ ಕಾರ್ಮಿಕರಿಗೆ ಜುಲೈನಿಂದ ಸೆಪ್ಟೆಂಬರ್‌ವರೆಗಿನ ವೇತನ ಹಾಗೂ ಇತರ ಭತ್ಯೆಗಳನ್ನು ನೀಡಲು ಕಾಲೇಜು ಶಿಕ್ಷಣ ಇಲಾಖೆಯಿಂದ ₹ 8.52 ಲಕ್ಷ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.

ಸರ್ಕಾರಿ ಕಾಲೇಜುಗಳಲ್ಲಿ 2006ರ ಏಪ್ರಿಲ್‌ 10ರವರೆಗೆ ಹತ್ತು ವರ್ಷಕ್ಕಿಂತ ಅಧಿಕ ಅವಧಿಯವರೆಗೆ ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡಿದವರನ್ನು ಅವರಿಗೆ 60 ವರ್ಷ ಪೂರ್ಣಗೊಳ್ಳುವವರೆಗೂ ಮುಂದುವರಿಸಲು ಇಲಾಖೆ ತೀರ್ಮಾನಿಸಿತ್ತು. ಅಂತಹ 21 ಕಾರ್ಮಿಕರು ಈಗ ಸೇವೆಯಲ್ಲಿದ್ದಾರೆ. ಅವರಿಗೆ ಮೂರು ತಿಂಗಳ ವೇತನ ನೀಡುವುದು ಬಾಕಿ ಇತ್ತು.

ಸದ್ಯ 2012ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಹಣಕಾಸು ಇಲಾಖೆಯಿಂದ ಒಪ್ಪಿಗೆ ದೊರೆತ ಬಳಿಕ 2018ರ ಪರಿಷ್ಕೃತ ವೇತನ ಶ್ರೇಣಿಗೆ ಅನುಸಾರವಾಗಿ ಸಂಬಳ ಪಾವತಿಗೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಅನುದಾನವನ್ನು ಆಯಾ ಕಾಲೇಜುಗಳ ಪ್ರಾಚಾರ್ಯರ ಖಾತೆಗೆ ನೇರವಾಗಿ ವರ್ಗ ಮಾಡಲಾಗಿದ್ದು, ಅವರೇ ವೇತನವನ್ನು ಬಿಡುಗಡೆ ಮಾಡಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !