ಸೋಮವಾರ, ಅಕ್ಟೋಬರ್ 14, 2019
22 °C

ಶಾಸಕರ ಮನೆಯ ಎದುರೇ ಶ್ರೀ ಗಂಧದ ಮರ ಕಳ್ಳತನ

Published:
Updated:
Prajavani

ಸೋಮವಾರಪೇಟೆ: ತಾಲ್ಲೂಕಿನ ಕುಂಬೂರು ಗ್ರಾಮದಲ್ಲಿರುವ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಮನೆಯ ಕೈತೋಟದಲ್ಲಿ ಬೆಳೆದಿದ್ದ ಆರು ಶ್ರೀ ಗಂಧದ ಮರಗಳನ್ನು ಗುರುವಾರ ರಾತ್ರಿ ಕಳ್ಳತನ ಮಾಡಲಾಗಿದೆ.
ಶಾಸಕ ಅಪ್ಪಚ್ಚು ರಂಜನ್ ವಿಧಾನಸಭೆ ಅಧಿವೇಶನದಲ್ಲಿ ಭಾಗಿಯಾಗಲು ಪತ್ನಿ ಸಮೇತ ಬೆಂಗಳೂರಿಗೆ ತೆರಳಿದ್ದರು. ಮನೆಗೆ ಬೀಗ ಹಾಕಿದ್ದು, ಗೇಟ್ ಸಮೀಪದ ಲೈನ್ ಮನೆಯಲ್ಲಿ ವಾಸವಿದ್ದ ವಾಚಮನ್ ನಿದ್ರೆಗೆ ಜಾರಿದ ಮೇಲೆ ಕಳ್ಳತನ ಮಾಡಲಾಗಿದೆ ಎನ್ನಲಾಗಿದೆ.

ಸ್ಥಳಕ್ಕೆ ಸೋಮವಾರಪೇಟೆ ಸಿಪಿಐ ನಂಜುಂಡೇಗೌಡ, ಠಾಣಾಧಿಕಾರಿ ಶಿವಶಂಕರ್, ಆರ್.ಎಫ್.ಒ. ಶಮಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಶ್ವಾನದಳವನ್ನು ಕರೆಸಲಾಗಿದೆ. ಠಾಣಾಧಿಕಾರಿ ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Post Comments (+)