ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ಯಪಾನ ನಿಷೇಧಕ್ಕೆ ಆಗ್ರಹ: ಸಿ.ಎಂ.ಗೆ ಪತ್ರ ಬರೆದ ಸಾಣೇಹಳ್ಳಿ ಶ್ರೀ

Last Updated 5 ಮೇ 2020, 15:42 IST
ಅಕ್ಷರ ಗಾತ್ರ

ಚಿತ್ರದುರ್ಗ: ಲಾಕ್‌ಡೌನ್‌ ಅವಧಿಯನ್ನೇ ಸದ್ಬಳಕೆ ಮಾಡಿಕೊಂಡು ರಾಜ್ಯದಲ್ಲಿ ಸಂಪೂರ್ಣ ಮದ್ಯಪಾನ ನಿಷೇಧ ಜಾರಿಗೆ ತರುವಂತೆ ಒತ್ತಾಯಿಸಿ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಒತ್ತಾಯಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸುದೀರ್ಘ ಪತ್ರ ಬರೆದಿದ್ದಾರೆ. ಮದ್ಯ ಮಾರಾಟದಿಂದ ಸಮಾಜದಲ್ಲಿ ಸೃಷ್ಟಿಯಾಗುವ ಸಮಸ್ಯೆಗಳ ಬಗ್ಗೆ ವಿವರಿಸಿದ್ದಾರೆ.

‘ಲಾಕ್‍ಡೌನ್ ಅವಧಿಯಲ್ಲಿ ಸಂಪೂರ್ಣ ಮದ್ಯ ನಿಷೇಧ ಮಾಡಿದ್ದರಿಂದ ಲಕ್ಷಾಂತರ ಕುಟುಂಬಗಳಲ್ಲಿ ನೆಮ್ಮದಿ ನೆಲೆಸಿತ್ತು. ಆರ್ಥಿಕ ಉಳಿತಾಯ, ಆರೋಗ್ಯ ಸುಧಾರಣೆ ಕಂಡಿತ್ತು. ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಸಂಪೂರ್ಣವಾಗಿ ನಿಂತಿತ್ತು. ಅಪರಾಧಗಳ ಸಂಖ್ಯೆಯೂ ಇಳಿಮುಖವಾಗಿತ್ತು. ಸಂಪೂರ್ಣ ಮದ್ಯ ನಿಷೇಧ ಮಾಡಿದರೆ ಸಮಾಜ ಸುಧಾರಣೆಯತ್ತ ಸಾಗಲಿದೆ’ ಎಂದಿದ್ದಾರೆ.

‘ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದರಿಂದ ಜನದಟ್ಟಣೆ ಹೆಚ್ಚಾಗಿ ಸೋಂಕು ಹರಡುವ ಆತಂಕ ಎದುರಾಗಿದೆ. ಕೌಟುಂಬಿಕ ಸಮಸ್ಯೆಗಳು ಬಿಗಡಾಯಿಸುತ್ತಿವೆ. ಉದ್ಯೋಗವಿಲ್ಲದೆ ತುತ್ತು ಆಹಾರಕ್ಕೂ ಪರಿತಪಿಸುತ್ತಿರುವ ಬಡ ಕುಟುಂಬಗಳ ನೆಮ್ಮದಿ ನಾಶವಾಗುತ್ತಿದೆ. ಆದಾಯದ ಮುಖ ನೋಡದೆ ಜನರ ಆರೋಗ್ಯ, ಆರ್ಥಿಕ ಪರಿಸ್ಥಿತಿ ಮತ್ತು ಕೌಟುಂಬಿಕ ನೆಮ್ಮದಿಯನ್ನು ಪರಿಗಣಿಸಿ ಮದ್ಯಪಾನ ನಿಷೇಧ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT