ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಗೊಳ್ಳಿ ರಾಯಣ್ಣ: ಸರ್ಕಾರಿ ಉತ್ಸವಕ್ಕೆ ಚಿಂತನೆ

Last Updated 26 ಜನವರಿ 2019, 18:40 IST
ಅಕ್ಷರ ಗಾತ್ರ

ಬೆಂಗಳೂರು: ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಹಾಗೂ ಹುತಾತ್ಮ ದಿನವನ್ನು ರಾಜ್ಯ ಸರ್ಕಾರದ ಉತ್ಸವವಾಗಿ ಆಚರಿಸುವ ಬಗ್ಗೆ ಶೀಘ್ರವೇ ತೀರ್ಮಾನಿಸಲಾಗುವುದು’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು.

ರಾಯಣ್ಣ ಸ್ಮರಣೋತ್ಸವದ ಅಂಗವಾಗಿ ನಗರದಲ್ಲಿನ ಅರಸು ವೃತ್ತದಲ್ಲಿರುವ ರಾಯಣ್ಣ ಪ್ರತಿಮೆಗೆ ಶನಿವಾರ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ‘ಈ ಬಗ್ಗೆ ಕನ್ನಡ ಒಕ್ಕೂಟ ಈಗಾಗಲೇ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಈ ದಿಸೆಯಲ್ಲಿ ಶೀಘ್ರವೇ ಸಮಾನ ಮನಸ್ಕರ ಸಭೆ ಕರೆದು ಚರ್ಚಿಸಲಾಗುವುದು’ ಎಂದು ಅವರು ಹೇಳಿದರು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ‘ಸಂಗೊಳ್ಳಿ ರಾಯಣ್ಣ ಸಮುದಾಯಕ್ಕೆ ಸದಾ ಸ್ಫೂರ್ತಿಯಾಗಿದ್ದಾರೆ’ ಎಂದರು.

‘ಕನ್ನಡ ಚಳವಳಿ’ ಪಕ್ಷದ ಮುಖಂಡ ವಾಟಾಳ್‌ ನಾಗರಾಜ್‌ ಮಾತನಾಡಿ, ‘ಸಂಗೊಳ್ಳಿ ರಾಯಣ್ಣ ರಾಷ್ಟ್ರೀಯ ಸ್ಮಾರಕ ನಿರ್ಮಾಣ ಮಾಡಬೇಕು’ ಎಂದೂ ಅವರು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT