ಶನಿವಾರ, ಫೆಬ್ರವರಿ 29, 2020
19 °C

ಹಿರಿಯ ರಂಗಕರ್ಮಿ ಸಂಜೀವ ಕುಲಕರ್ಣಿ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ತೀವ್ರತರ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ರಂಗ ಕಲಾವಿದ, ನಿರೂಪಕ ಸಂಜೀವ ಕುಲಕರ್ಣಿ (49) ಶನಿವಾರ ನಿಧನರಾದರು.

ಸಂಜೀವ ಅವರು ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದರು.

ನಗರದ ನಾರಾಯಣ ಹೃದಯ ವಿಜ್ಞಾನ ಸಂಸ್ಥೆಯ ತೀವ್ರ ನಿಗಾ ಘಟಕದಲ್ಲಿ ಅವರು ದಾಖಲಾಗಿದ್ದರು.

ಸಂಜೀವ ಅವರಿಗೆ ಪತ್ನಿ ಮತ್ತು ಕಿರುತೆರೆ ನಟ ಪುತ್ರ ಸೌರಭ್ ಕುಲಕರ್ಣಿ ಇದ್ದಾರೆ.

ಚಾಮರಾಜಪೇಟೆಯ ಟಿ.ಆರ್. ಮಿಲ್‌ ಬಳಿಯ ಸ್ಮಶಾನದಲ್ಲಿ ಭಾನುವಾರ ಬೆಳಿಗ್ಗೆ 9ಕ್ಕೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಸೌರಭ್ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು