ಸೋಮವಾರ, ಅಕ್ಟೋಬರ್ 21, 2019
25 °C
ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್‌. ಸಂತೋಷ್‌ ಹೆಗ್ಡೆ

ಕಲಾಪಕ್ಕೆ ಮಾಧ್ಯಮ ನಿರ್ಬಂಧ ಸರಿಯಲ್ಲ: ಸಂತೋಷ್‌ ಹೆಗ್ಡೆ

Published:
Updated:

ಮಂಗಳೂರು: ‘ಕಲಾಪ ವರದಿಗೆ ಕೇವಲ ದೂರದರ್ಶನಕ್ಕೆ ಅವಕಾಶ ಕೊಟ್ಟಿರುವುದು ಸರಿಯಲ್ಲ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದಂತೆ ಮಾಧ್ಯಮವನ್ನೂ ಕೂಡ ಸಂವಿಧಾನದ ಒಂದು ಅಂಗ ಎಂದು ತಿಳಿದುಕೊಳ್ಳಬೇಕು. ಸರ್ಕಾರಿ ಸಂಸ್ಥೆಗಳ ಜತೆಗೆ ಖಾಸಗಿ ವಾಹಿನಿಗಳಿಗೂ ಕಲಾಪ ವರದಿ ಮಾಡಲು ಅವಕಾಶ ಮಾಡಿಕೊಡಬೇಕು’ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್‌. ಸಂತೋಷ್‌ ಹೆಗ್ಡೆ ಅಭಿಪ್ರಾಯಪಟ್ಟರು.

ನಗರದ ಡಾ. ಟಿ.ಎಂ.ಎ.ಪೈ ಹಾಲ್‌ನಲ್ಲಿ ಶನಿವಾರ ಆರಂಭಗೊಂಡ ನಾಲ್ಕು ದಿನಗಳ ರಾಜ್ಯ ಮಟ್ಟದ ಅಂಚೆ ಚೀಟಿಗಳ ಪ್ರದರ್ಶನ ಉದ್ಘಾಟನಾ ಸಮಾರಂಭದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

‘ಮಾಹಿತಿ ಸ್ವಾತಂತ್ರ್ಯ ಸಾಂವಿಧಾನಿಕ ಹಕ್ಕು. ಹಾಗಾಗಿ, ವಿಧಾನಸಭೆಯ ಕಲಾಪವನ್ನು ವರದಿ ಮಾಡುವುದಕ್ಕೆ ಖಾಸಗಿ ವಾಹಿನಿಗಳಿಗೆ ಸರ್ಕಾರ ನಿರ್ಬಂಧ ಹೇರಿರುವುದು ಸರಿಯಾದ ಕ್ರಮವಲ್ಲ’ ಎಂದು ಅವರು ಟೀಕಿಸಿದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)