ಶುಕ್ರವಾರ, ಫೆಬ್ರವರಿ 28, 2020
19 °C
ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹ

13ಕ್ಕೆ ಕರ್ನಾಟಕ ಬಂದ್‌ಗೆ ಕರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕನ್ನಡಿಗರಿಗೆ ಉದ್ಯೋಗಗಳಲ್ಲಿ ಮೀಸಲಾತಿ ನೀಡುವ ಡಾ.ಸರೋಜಿನಿ ಮಹಿಷಿ ವರದಿ ಜಾರಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ಇದೇ 13ರಂದು ರಾಜ್ಯದಾದ್ಯಂತ ಬಂದ್‌ಗೆ ಕರೆ ನೀಡಿದೆ. 

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ನಾಗೇಶ್‌, ‘ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ 2019ರ ನವೆಂಬರ್ 4ರಿಂದ ನಗರದ ಮೌರ್ಯ ವೃತ್ತದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುತ್ತಿದೆ. ಇಂದಿಗೆ 93 ದಿನಗಳು ಪೂರೈಸಿರುವ ಧರಣಿಗೆ ಹಲವು ರಾಜಕೀಯ ಮುಖಂಡರು, ಸಾಹಿತಿಗಳು ಹಾಗೂ ಮಠಾಧೀಶರು ಬೆಂಬಲ ನೀಡಿದ್ದಾರೆ’ ಎಂದರು.

‘ಧರಣಿ ವೇಳೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಹಾಗೂ ಕಾರ್ಮಿಕ ಸಚಿವ ಎಸ್.ಸುರೇಶ್ ಕುಮಾರ್‌ ಭೇಟಿ ನೀಡಿ, ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಆದರೆ, ಇಲ್ಲಿವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು