ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವೇಷ ಬಿತ್ತುವ ಶಿಕ್ಷಣ: ಕೇಂದ್ರದ ವಿರುದ್ಧ ಸೆಂಥಿಲ್‌ ವಾಗ್ದಾಳಿ

Last Updated 27 ನವೆಂಬರ್ 2019, 16:21 IST
ಅಕ್ಷರ ಗಾತ್ರ

ರಾಯಚೂರು: ’ದೇಶದಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸುವ ತಯಾರಿಯಲ್ಲಿರುವ ರಾಷ್ಟ್ರೀಯ ಶಿಕ್ಷಣ ಆಯೋಗವು ಪ್ರಧಾನಮಂತ್ರಿ ಕೈಯಲ್ಲಿದ್ದು, ಮುಂದಿನ ದಿನಗಳಲ್ಲಿ ದ್ವೇಷ ಬಿತ್ತುವ ಶಿಕ್ಷಣ ಬರುವ ಆತಂಕ ಕಾಡುತ್ತಿದೆ’ ಎಂದು ಐಎಎಸ್‌ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವ ಸಸಿಕಾಂತ್‌ ಸೆಂಥಿಲ್‌ ಅವರು ಕೇಂದ್ರದ ವಿರುದ್ಧ ವಾಗ್ದಾಳಿ ಮುಂದುವರಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೂತನ ಶಿಕ್ಷಣ ನೀತಿಯಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗಲಿದೆ. ಐದು ಹಾಗೂ ಏಳನೇ ತರಗತಿಗೆ ಬೋರ್ಡ್‌ ಪರೀಕ್ಷೆ ಮಾಡುತ್ತಿರುವುದು ಸರಿಯಾದ ಕ್ರಮವಲ್ಲ’ ಎಂದು ಹೇಳಿದರು.

‘ಅಧಿಕಾರಿಯಾಗಿ ಕಾನೂನು ವಿರೋಧಿಸುವುದು ತಪ್ಪಾಗುತ್ತದೆ. ಈಗ ಅಧಿಕಾರದಿಂದ ಹೊರಬಂದು ಮಾತನಾಡುತ್ತಿದ್ದೇನೆ. ದೇಶದಲ್ಲಿ ಸ್ಥಿತಿ ಸರಿಯಿಲ್ಲ ಎಂದು ಹುದ್ದೆಗೆ ರಾಜೀನಾಮೆ ನೀಡಿದ್ದೇನೆ’ ಎಂದರು.

‘ನನ್ನ ರಾಜೀನಾಮೆ ಅಂಗೀಕರಿಸುವುದು ಸರ್ಕಾರಕ್ಕೆ ಬಿಟ್ಟಿರುವ ನಿರ್ಧಾರ. ನಾನು ಕೆಲಸಕ್ಕೆ ಬರುವುದಿಲ್ಲ ಎಂದು ಹೇಳಿದ್ದು, ರಾಜೀನಾಮೆ ಹಿಂಪಡೆಯುವ ಬಗ್ಗೆ ಯಾವುದೇ ಮಾತುಕತೆ ಮಾಡಿಲ್ಲ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT