ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸತೀಶ ಜಾರಕಿಹೊಳಿ ನಾಮಪತ್ರ ತಿರಸ್ಕೃತ

Last Updated 19 ನವೆಂಬರ್ 2019, 13:59 IST
ಅಕ್ಷರ ಗಾತ್ರ

ಬೆಳಗಾವಿ: ಗೋಕಾಕ ಕ್ಷೇತ್ರದ ಉಪಚುನಾವಣೆಗೆ ಯಮಕನಮರಡಿ ಕಾಂಗ್ರೆಸ್‌ ಶಾಸಕ ಸತೀಶ ಜಾರಕಿಹೊಳಿ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿದೆ.

ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ 4 ಸೆಟ್‌ ನಾಮಪತ್ರ ಸಲ್ಲಿಸಿದ್ದರು. ಅವುಗಳ ಪರಿಶೀಲನಾ ಕಾರ್ಯ ಮಂಗಳವಾರ ನಡೆಯಿತು. ಫಾರಂ ‘ಎ’ ಹಾಗೂ ಫಾರಂ ‘ಬಿ‘ ಲಗತ್ತಿಸಿರಲಿಲ್ಲ ಹಾಗೂ ಘೋಷಣಾ ಪತ್ರದಲ್ಲಿ ಕೆಲವು ಅಂಶಗಳನ್ನು ಭರ್ತಿ ಮಾಡಿರಲಿಲ್ಲ. ಹೀಗಾಗಿ, ಚುನಾವಣಾಧಿಕಾರಿ ಟಿ. ಭೂಬಾಲನ್ ನಾಮಪತ್ರವನ್ನು ತಿರಸ್ಕರಿಸಿದರು.

ಕ್ಷೇತ್ರದಲ್ಲಿ ಅವರ ಸಹೋದರರೇ ಆದ ಲಖನ್ ಜಾರಕಿಹೊಳಿ (ಕಾಂಗ್ರೆಸ್‌) ಹಾಗೂ ರಮೇಶ ಜಾರಕಿಹೊಳಿ (ಬಿಜೆಪಿ) ಕಣದಲ್ಲಿದ್ದಾರೆ. ಕೊನೆ ಕ್ಷಣದಲ್ಲಿ ಸತೀಶ ನಾಮಪತ್ರ ಸಲ್ಲಿಸಿದ್ದರು.

ಕಾಗವಾಡ ಮತ್ತು ಅಥಣಿ ಕ್ಷೇತ್ರದಲ್ಲಿ ಯಾವುದೇ ಪ್ರಮುಖ ಪಕ್ಷಗಳ ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT