ಅರಣ್ಯ
ಅರಣ್ಯ ತೆರವು; ಚರ್ಚಿಸಿ ತೀರ್ಮಾನ: ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ: ‘ಅರಣ್ಯ ಹಕ್ಕಿಲ್ಲದವರನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ಯಾವ ಆಧಾರದ ಮೇಲೆ ಆದೇಶ ನೀಡಿದೆ ಎನ್ನುವುದನ್ನು ಅಧ್ಯಯನ ಮಾಡುತ್ತೇವೆ. ಮುಂದೆ ಏನು ಮಾಡಬೇಕು ಎನ್ನುವುದನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ತೀರ್ಮಾನ ಕೈಗೊಳ್ಳುತ್ತೇವೆ’ ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ಶುಕ್ರವಾರ ಇಲ್ಲಿ ತಿಳಿಸಿದರು.
‘ಅರಣ್ಯದಲ್ಲಿ ವಾಸಿಸಲು ಹಕ್ಕು ನೀಡುವಂತೆ ಸಲ್ಲಿಸಲಾಗಿದ್ದ ಸಾವಿರಾರು ಅರ್ಜಿಗಳು ತಿರಸ್ಕೃತಗೊಳ್ಳಲು ಕಾರಣವೇನು? ಇಂತಹ ಅರ್ಜಿಗಳ ಪುನರ್ ಪರಿಶೀಲನೆ ಮಾಡಲು ಸಾಧ್ಯವೇ ಎನ್ನುವುದರ ಬಗ್ಗೆಯೂ ಗಮನ ಹರಿಸುತ್ತೇವೆ’ ಎಂದು ಹೇಳಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.