ಸೋಮವಾರ, ಮಾರ್ಚ್ 8, 2021
27 °C

ಹೋಮ–ಹವನದಲ್ಲಿ ಆಸಕ್ತಿ ಇಲ್ಲ: ಸತೀಶ ಜಾರಕಿಹೊಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Satish Jarkiholi

ದಾವಣಗೆರೆ: ವೈಯಕ್ತಿವಾಗಿ ನನಗೆ ಹೋಮ-ಹವನದ ಬಗ್ಗೆ ಆಸಕ್ತಿ‌ ಇಲ್ಲ. ಅವರಿಗೆ ಇಷ್ಟವಾದ್ದರಿಂದ ಅವರು ಮಾಡಿಕೊಂಡಿದ್ದಾರೆ. ನಾನು ಬೇರೆ ಕೆಲಸದ ನಿಮಿತ್ತ ಅಲ್ಲಿಗೆ ಹೋಗಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ಕೆಪಿಸಿಸಿ ನೂತ‌ನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡೆಸಿದ ಹೋಮ‌ಕ್ಕೆ ತೆರಳದೇ ಇರುವುದರ ಬಗ್ಗೆ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಲಕ್ಷ್ಮಿಪುರ ತಾಂಡದಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ವಿಧಾನ ಪರಿಷತ್ ಸದಸ್ಯರ ಆಯ್ಕೆಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಆದ್ಯತೆ ನೀಡಲು ಚಿಂತನೆ ನಡೆದಿದೆ ಎಂದೂ ಅವರು ಹೇಳಿದ್ದಾರೆ.

ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಪದಗ್ರಹಣಕ್ಕೂ ಮುನ್ನ ಹೋಮ

ಈಗಾಗಲೇ ಬಿಜೆಪಿಯಲ್ಲಿ ಮೂರು ಗುಂಪುಗಳಾಗಿವೆ. ಈಗ ಮತ್ತೆ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಶಾಸಕರನ್ನು ಕರೆದುಕೊಂಡು ಹೋಗುವುದಾಗಿ ಹೇಳಿದ್ದಾರೆ. ಇನ್ನೊಂದು ಗುಂಪು ಮಾಡುವ ಪ್ರಯತ್ನ ಇರಬಹುದು ಎಂದು ಅವರು ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು