ಬುಧವಾರ, ಜನವರಿ 29, 2020
24 °C

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ನಿಭಾಯಿಸುವೆ: ಸತೀಶ ಜಾರಕಿಹೊಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಆದರೆ, ಹೈಕಮಾಂಡ್‌ ಕೊಟ್ಟರೆ ಸಮರ್ಥವಾಗಿ ನಿಭಾಯಿಸುವೆ’ ಎಂದು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನಾನು ಪಕ್ಷದ ಶಿಸ್ತಿನ ಸಿಪಾಯಿ. ಹೈಕಮಾಂಡ್ ಯಾವುದೇ ಜವಾಬ್ದಾರಿ ಕೊಟ್ಟರೂ ನಿರ್ವಹಿಸುತ್ತೇನೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಡುವುದು, ಬಿಡುವುದು ಹೈಕಮಾಂಡ್‌ಗೆ ಬಿಟ್ಟಿದ್ದು. ಯಾರಿಗೆ ಕೊಟ್ಟರೂ ಅವರಿಗೆ ನನ್ನ ಸಹಕಾರ ಇರುತ್ತದೆ. ಅಧ್ಯಕ್ಷ ಸ್ಥಾನಕ್ಕೆ‌ ಲಾಬಿ ಮಾಡಿಲ್ಲ’ ಎಂದರು.

‘ಕೆಪಿಸಿಸಿಗೆ 4 ಕಾರ್ಯಾಧ್ಯಕ್ಷ ಹುದ್ದೆ ನೀಡುವ ವಿಚಾರವಾಗಿ ಶೀಘ್ರದಲ್ಲಿಯೇ ಸಭೆ ಕರೆಯಲಿದ್ದಾರೆ’ ಎಂದು ಅವರು ತಿಳಿಸಿದರು.

‘ಪಕ್ಷದಲ್ಲಿ ಎರಡು ಬಣ ಅಂತೇನಿಲ್ಲ. ಪಕ್ಷದ ಬಲವರ್ಧನೆಗೆ ಎಲ್ಲರೂ ಒಟ್ಟಿಗೆ ಹೋಗಲು ಕೆಲಸ ಮಾಡುತ್ತಿದ್ದೇವೆ. ಉಪ ಚುನಾವಣೆ ಸೋಲಿನಿಂದ ಆತಂಕಪಡುವ ಅಗತ್ಯವಿಲ್ಲ. ಕಷ್ಟ ಕಾಲದಲ್ಲಿಯೂ‌ ಪಕ್ಷದ ಪರವಾಗಿರಬೇಕು.‌ ಮುಂದಿನ ‌ಚುನಾವಣೆಗೆ ತಯಾರಾಗುತ್ತಿದ್ದೇವೆ’ ಎಂದು ಅವರು ಹೇಳಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು