ತೇಜಸ್ವಿ ಕಟ್ಟಿಮನಿಗೆ ‘ಸೌಹಾರ್ದ ಸನ್ಮಾನ’

7

ತೇಜಸ್ವಿ ಕಟ್ಟಿಮನಿಗೆ ‘ಸೌಹಾರ್ದ ಸನ್ಮಾನ’

Published:
Updated:

ಮೈಸೂರು: ಉತ್ತರ ಪ್ರದೇಶ ಹಿಂದಿ ಸಂಸ್ಥಾನ ನೀಡುವ ‘ಸೌಹಾರ್ದ ಸನ್ಮಾನ’ಕ್ಕೆ ಕನ್ನಡಿಗ, ಮಧ್ಯಪ್ರದೇಶದ ಇಂದಿರಾ ಗಾಂಧಿ ರಾಷ್ಟ್ರೀಯ ಆದಿವಾಸಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ತೇಜಸ್ವಿ ಕಟ್ಟಿಮನಿ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹ 2 ಲಕ್ಷ ನಗದು, ಪ್ರಶಸ್ತಿ ಫಲಕ ಒಳಅಗೊಂಡಿದೆ. ಕಟ್ಟಿಮನಿಯವರು ಹಿಂದಿ ಭಾಷೆ, ಸಾಹಿತ್ಯ ಹಾಗೂ ಉನ್ನತ ಶಿಕ್ಷಣಕ್ಕೆ ನೀಡಿದ ಕೊಡುಗೆ ಪರಿಗಣಿಸಿ ಉತ್ತರ ಪ್ರದೇಶ ಸರ್ಕಾರ ಈ ಪ್ರಶಸ್ತಿಯನ್ನು ಘೋಷಿಸಿದೆ.

ಈ ತಿಂಗಳ ಅಂತ್ಯದಲ್ಲಿ ಲಖನೌದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !