ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು; ಸಿದ್ದರಾಮಯ್ಯ, ಕುಮಾರಸ್ವಾಮಿ ವಿರೋಧ

Last Updated 27 ಮೇ 2020, 9:48 IST
ಅಕ್ಷರ ಗಾತ್ರ

ಬೆಂಗಳೂರು: ಯಲಹಂಕ ಮೇಲ್ಸೇತುವೆಗೆ ವಿ.ಡಿ ಸಾವರ್ಕರ್‌ ಅವರ ಹೆಸರನ್ನು ಇಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿರುವುದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಎಚ್‌.ಡಿ. ಕುಮಾರಸ್ವಾಮಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಯಲಹಂಕ‌ ಮೇಲ್ಸೆತುವೆಗೆ ವಿ.ಡಿ. ಸಾವರ್ಕರ್ ಹೆಸರಿಡುವ ರಾಜ್ಯ ಸರ್ಕಾರದ ನಿರ್ಧಾರ ಈ ಮಣ್ಣಿನ ಸ್ವಾತಂತ್ರ್ಯ ಹೋರಾಟಗಾರರಿಗೆ‌ ಮಾಡುವ ಅವಮಾನ. ತಕ್ಷಣ ಈ ನಿರ್ಧಾರವನ್ನು ಕೈಬಿಟ್ಟು ರಾಜ್ಯದ ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಹೆಸರಿಡಬೇಕೆಂದು ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತೇನೆ ಎಂದಿದ್ದಾರೆ.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದು ತೆರೆ ಹಿಂದಿನ‌ ಸೂತ್ರಧಾರರೇ ಹೊರತು, ಚುನಾಯಿತ ಸರ್ಕಾರ ಅಲ್ಲ‌ ಎನ್ನುವುದಕ್ಕೆ ಯಲಹಂಕ ಮೇಲ್ಸೆತುವೆಗೆ ಸಾವರ್ಕರ್ ಹೆಸರಿಡುವ ಅವಸರದ ನಿರ್ಧಾರವೇ‌ ಪುರಾವೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ, ನೀವು ವಿರೋಧ ಪಕ್ಷಗಳ ಸಹಕಾರ ಬಯಸುತ್ತಿರುವುದು ಇಂತಹ ಜನವಿರೋಧಿ ನಿರ್ಧಾರಗಳಿಗಾಗಿಯೇ ಎಂದು ಪ್ರಶ್ನಿಸಿದ್ದಾರೆ.

ಇನ್ನು ಸರ್ಕಾರದ ಈ ನಡೆಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕೂಡಾ ವಿರೋಧ ವ್ಯಕ್ತಪಡಿಸಿದ್ದು, ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ನಾಮಕರಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ನಾಡಿನ ಅಭ್ಯುದಯಕ್ಕೆ ಹೋರಾಟ ಮಾಡಿದವರಿಗೆ ಮಾಡುತ್ತಿರುವ ಅಪಮಾನ. ಇದು ರಾಜ್ಯ ಸರ್ಕಾರಕ್ಕೆ ಶೋಭೆ ತರದು ಎಂದು ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ಸ್ವಾತಂತ್ರ್ಯಪೂರ್ವ ಮತ್ತು ನಂತರ ನಾಡಿನ ಅಭಿವೃದ್ಧಿಗೆ ಮತ್ತು ಹಿತಕ್ಕಾಗಿ ದುಡಿದ ಹಲವು ಮಹನೀಯರಿದ್ದಾರೆ. ಅವರ ಹೆಸರನ್ನು ಈ ಮೇಲ್ಸೇತುವೆಗೆ ಇಡಬಹುದಿತ್ತು. ರಾಜ್ಯದ ಹೋರಾಟಗಾರರ ಹೆಸರನ್ನು ಬೇರೆ ರಾಜ್ಯಗಳಲ್ಲಿ ನಾಮಕರಣ ಮಾಡುವುದುಂಟೆ? ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಹಿಂದೆ ಸರಿಯುವಂತೆ ನಾಡಿನ ಜನತೆಯ ಪರವಾಗಿ ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT