ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಸಿ/ಎಸ್‌ಟಿ ಕಾಯ್ದೆ: ತಡೆ ಇಲ್ಲ

Last Updated 30 ಜನವರಿ 2019, 19:15 IST
ಅಕ್ಷರ ಗಾತ್ರ

ನವದೆಹಲಿ :ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಗೆ (ಎಸ್‌ಸಿ/ಎಸ್‌ಟಿ ಕಾಯ್ದೆ) ತಂದಿರುವ ತಿದ್ದುಪಡಿಗಳಿಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ಬುಧವಾರ ಮತ್ತೊಮ್ಮೆ ನಿರಾಕರಿಸಿತು.

‘ಎಸ್‌ಸಿ/ಎಸ್‌ಟಿ ಕಾಯ್ದೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ 2018ರ ಮಾ. 20ರಂದು ನೀಡಿದ್ದ ತೀರ್ಪಿನ ಮರುಪರಿಶೀಲನೆಗೆ ಕೇಂದ್ರ ಸಲ್ಲಿಸಿರುವ ಅರ್ಜಿ ಹಾಗೂ ಕಾಯ್ದೆಗೆ ತಂದಿರುವ ತಿದ್ದುಪಡಿ ಕುರಿತು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಫೆ. 19ರಂದು ನಡೆಸಲಾಗುವುದು’ ಎಂದು ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠ ಹೇಳಿತು.

ಎಸ್‌ಸಿ/ಎಸ್‌ಟಿ ಜನರ ವಿರುದ್ಧದ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯನ್ನು ತಕ್ಷಣವೇ ಬಂಧಿಸಬಾರದು ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿತ್ತು. ಈ ತೀರ್ಪನ್ನು ರದ್ದು ಮಾಡಲು ಕಾಯ್ದೆಗೆ ತಿದ್ದುಪಡಿ ತರಲಾಗಿದೆ.

ಎಸ್‌ಸಿ/ಎಸ್‌ಟಿ ಕಾಯ್ದೆಯ ತಿದ್ದುಪಡಿಗೆ ತಡೆ ನೀಡಲು ಇದೇ 25ರಂದು ನಿರಾಕರಿಸಿದ್ದ ಸುಪ್ರೀಂ ಕೋರ್ಟ್‌, ಕೇಂದ್ರದ ಮರುಪರಿಶೀಲನಾ ಅರ್ಜಿ ಸೇರಿದಂತೆ ಇದಕ್ಕೆ ಸಂಬಂಧಿಸಿದ ಎಲ್ಲ ಅರ್ಜಿಗಳ ವಿಚಾರಣೆಯನ್ನು ಸೂಕ್ತ ಪೀಠವು ನಡೆಸಲಿದೆ ಎಂದು
ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT