ಮಂಗಳವಾರ, ಜನವರಿ 21, 2020
20 °C

ಪರಿಶಿಷ್ಟ ಜಾತಿಯವರಿಗೆ ಶೇ 20 ಮೀಸಲಾತಿ ನೀಡಲಿ: ‌ಎಚ್‌.ಆಂಜನೇಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ಮೀಸಲಾತಿಯನ್ನು ಶೇ 15ರಿಂದ ಶೇ 20ಕ್ಕೆ ಹೆಚ್ಚಿಸುವಂತೆ ಕೋರಿ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ್ ದಾಸ್‌ ಆಯೋಗಕ್ಕೆ ಇದೇ 23ರಂದು ಮನವಿ ಸಲ್ಲಿಸಲಿದ್ದೇವೆ’ ಎಂದು ಕಾಂಗ್ರೆಸ್ ಮುಖಂಡ ಎಚ್‌.ಆಂಜನೇಯ ತಿಳಿಸಿದರು.

ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,‘ ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಜಾತಿ ಸಮುದಾಯದ ಮೀಸಲಾತಿ ಹೆಚ್ಚಿಸಲು ರಾಜ್ಯ ಸರ್ಕಾರ ಹೈಕೋರ್ಟ್‌ನ ನಿವೃತ್ತ ಮುಖ್ಯನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ್ ದಾಸ್‌ ನೇತೃತ್ವದಲ್ಲಿ ಆಯೋಗ ರಚಿಸಿದೆ. ಮೀಸಲಾತಿ ಪ್ರಮಾಣವನ್ನು ಶೇ 17ಕ್ಕೆ ಏರಿಕೆ ಮಾಡುವ ಅಂಶಗಳು ವರದಿಯಲ್ಲಿವೆ. ಆದರೆ, ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ನೋಡಿದಾಗ, ಈ ಮೀಸಲಾತಿ ಪ್ರಮಾಣ ಸಾಕಾಗುವುದಿಲ್ಲ. ಕನಿಷ್ಠ ಶೇ 20ರಷ್ಟು ಮೀಸಲಾತಿ ಸಮುದಾಯಕ್ಕೆ ಅವಶ್ಯಕ’ ಎಂದರು.

ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್,‘ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸರ್ಕಾರ ಶೇ 17ರಷ್ಟು ಮೀಸಲಾತಿ ನೀಡಲು ಮುಂದಾಗಿದ್ದು, ಇದು ಅವೈಜ್ಞಾನಿಕ. ಸಮಿತಿಯಲ್ಲಿ ಕೆಲವು ಗೊಂದಲಗಳಿದ್ದು, ಅವುಗಳನ್ನು ಸರಿಪಡಿಸಬೇಕಿದೆ’ ಎಂದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು