ಸಮವಸ್ತ್ರ ನೀಡಿಕೆ: ಮಾಹಿತಿ ಕೇಳಿದ ಹೈಕೋರ್ಟ್
ಬೆಂಗಳೂರು: ‘ಪರಿಶಿಷ್ಟ ಜಾತಿ (ಎಸ್.ಸಿ), ಪರಿಶಿಷ್ಟ ವರ್ಗ (ಎಸ್.ಟಿ) ಮತ್ತು ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್), ಕಡ್ಡಾಯ ಶಿಕ್ಷಣ ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಕಲಿಯುತ್ತಿರುವ ಪ್ರಾಥಮಿಕ ಹಂತದ ಶಾಲಾ ಮಕ್ಕಳಿಗೆ ನೀಡಲಾಗುವ ಎರಡು ಸೆಟ್ ಸಮವಸ್ತ್ರ ನೀಡಿಕೆಯಲ್ಲಿ ಒಂದು ಸೆಟ್ ಅನ್ನು ಹೊಲಿಯದೇ ಬಟ್ಟೆ ಮಾತ್ರ ನೀಡಲಾಗುತ್ತಿದೆ’ ಎಂಬ ಆಕ್ಷೇಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್, ರಾಜ್ಯ ಸರ್ಕಾರದಿಂದ ಮಾಹಿತಿ ಕೇಳಿದೆ.
‘ಸಮವಸ್ತ್ರದಲ್ಲಿ ಎರಡನೇ ಸೆಟ್‌ನಲ್ಲಿ ಕೇವಲ ಬಟ್ಟೆ ನೀಡದೆ ಅದನ್ನೂ ಹೊಲಿಸಿಕೊಡುವ ಕುರಿತಂತೆ ಇದೇ 24ರೊಳಗೆ ಮುಚ್ಚಳಿಕೆ ನೀಡಬೇಕು. ಇಲ್ಲವಾದಲ್ಲಿ ಸೂಕ್ತ ಆದೇಶ ನೀಡಬೇಕಾಗುತ್ತದೆ’ ಎಂದು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಮತ್ತು ನ್ಯಾ.ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸರ್ಕಾರಿ ವಕೀಲರಿಗೆ ನಿರ್ದೇಶಿಸಿದೆ. ಈ ಅರ್ಜಿ ವಿಚಾರಣೆಯನ್ನು ಇದೇ 24ಕ್ಕೆ ಮುಂದೂಡಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.