ಗುರುವಾರ , ಆಗಸ್ಟ್ 22, 2019
23 °C

ಬಿ.ಇಡಿ, ಡಿ.ಇಡಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

Published:
Updated:

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2019-20ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ ಬಿ.ಇಡಿ ಮತ್ತು ಡಿ.ಇಡಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಿದೆ.

ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಷನ್ ಹಾಗೂ ಡಿಪಾರ್ಟ್‍ಮೆಂಟ್ ಆಫ್ ಸ್ಟೇಟ್ ಎಜುಕೇಷನಲ್ ರೀಸರ್ಚ್ ಮತ್ತು ಟ್ರೈನಿಂಗ್‍ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ, ಅರೆಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕಲಿಕಾ ಮತ್ತು ಬೋಧನಾ ಸಾಮಗ್ರಿ ಖರೀದಿಸಲು ₹25 ಸಾವಿರ ಪ್ರೋತ್ಸಾಹಧನ ನೀಡಲಾಗುವುದು.

‌ಅರ್ಜಿಗಳನ್ನು www.backwardclasses.kar.nic.in ವೆಬ್‌ಸೈಟ್‌ ಮೂಲಕ ಪಡೆಯಬಹುದು. 

ಭರ್ತಿ ಮಾಡಿದ ಅರ್ಜಿ ಗಳನ್ನು ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಪೋಡಿಯಂ ಬ್ಲಾಕ್, ವಿ.ವಿ ಗೋಪುರ, ಬೆಂಗಳೂರು-01 ವಿಳಾಸಕ್ಕೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನ.  

Post Comments (+)