ಇನ್ನು ಮುಂದೆ ವಿದ್ಯಾರ್ಥಿ ವೇತನ ಸಲೀಸು

7
ಏಕೀಕೃತ ವಿದ್ಯಾರ್ಥಿ ವೇತನ ವಿತರಣೆಗೆ ತಂತ್ರಾಂಶ

ಇನ್ನು ಮುಂದೆ ವಿದ್ಯಾರ್ಥಿ ವೇತನ ಸಲೀಸು

Published:
Updated:

ಬೆಂಗಳೂರು: ಸಮಗ್ರ ಹಾಗೂ ಏಕೀಕೃತ ವಿದ್ಯಾರ್ಥಿ ವೇತನ ವಿತರಣೆ ತಂತ್ರಾಂಶವನ್ನು (ಎಸ್‌ಎಸ್‌ಪಿ) ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಬುಧವಾರ ಬಿಡುಗಡೆ ಮಾಡಿದರು.

ಈ ತಂತ್ರಾಂಶದ ಮೂಲಕ ವಿದ್ಯಾರ್ಥಿ ವೇತನವನ್ನು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್‌ ಖಾತೆಗೆ ವರ್ಗಾಯಿಸಲಾಗುತ್ತದೆ.

ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಮೆಟ್ರಿಕ್‌ಪೂರ್ವ ಹಾಗೂ ಮೆಟ್ರಿಕ್‌ ನಂತರದ ವಿದ್ಯಾರ್ಥಿವೇತನಗಳ ವಿತರಣೆ ಪ್ರಕ್ರಿಯೆ ಸರಳಗೊಳಿಸಲಾಗಿದ್ದು, ಅನಗತ್ಯ ವಿಳಂಬ ತಪ್ಪಲಿದೆ.

ವಿವಿಧ ಇಲಾಖೆಗಳು ಈವರೆಗೆ ತಮ್ಮ ವ್ಯಾಪ್ತಿಗೆ ಸಂಬಂಧಿಸಿದ ವಿದ್ಯಾರ್ಥಿ ವೇತನ ವಿತರಿಸಲು ಪ್ರತ್ಯೇಕ ವ್ಯವಸ್ಥೆಯನ್ನು ಹೊಂದಿದ್ದು, ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ ಬಳಿಕ ಅದರ ಪ್ರತಿಯನ್ನು ಪೂರಕ ದಾಖಲೆಗಳೊಂದಿಗೆ ತಾಲ್ಲೂಕು ಕಚೇರಿಗೆ ಸಲ್ಲಿಸಬೇಕಿತ್ತು. ವ್ಯವಸ್ಥೆಯಲ್ಲಿ ಏಕರೂಪತೆಯ ಕೊರತೆಯಿಂದ ಅರ್ಜಿಗಳ ಪರಿಶೀಲನೆ ಹಾಗೂ ಅನುಷ್ಠಾನವಿಳಂಬವಾಗುತ್ತಿತ್ತು. ವಿದ್ಯಾರ್ಥಿ ವೇತನಗಳನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಿಸಲಾಗುತ್ತಿದೆ. ಇ–ಆಡಳಿತ ಇಲಾಖೆಯು ಸಂಬಂಧಿಸಿದ ಇಲಾಖೆಗಳೊಂದಿಗೆ ಚರ್ಚಿಸಿ ರಾಷ್ಟ್ರೀಯ ಮಾಹಿತಿ ಕೇಂದ್ರದ (ಎನ್‌ಐಸಿ) ಘಟಕದ ಸಹಯೋಗದಲ್ಲಿ ಏಕೀಕೃತ ತಂತ್ರಾಂಶ ಅಭಿವೃದ್ಧಿಪಡಿಸಿದೆ. ಆರಂಭದಲ್ಲಿ 3 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ, ‘ವಿದ್ಯಾರ್ಥಿ ವೇತನ ಪಡೆಯುವ ವರಲ್ಲಿ ಶೇ 25ಕ್ಕೂ ಹೆಚ್ಚು ಮಂದಿಗೆ ಸಮಾಜ ಕಲ್ಯಾಣ ಇಲಾಖೆ ಮೂಲಕ ನೀಡಲಾಗುತ್ತಿತ್ತು. ಹೊಸ ಪದ್ಧತಿಯಿಂದ ವಿದ್ಯಾರ್ಥಿಗಳಿಗೆ ಸಾಮಾಜಿಕ ನ್ಯಾಯ ಸಿಗಬಲ್ಲದು’ ಎಂದರು.

*
ತಂತ್ರಾಂಶ ಬಳಕೆದಾರ ಸ್ನೇಹಿ ಆಗಿದ್ದು, ವಿದ್ಯಾರ್ಥಿ ವೇತನ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸಿದೆ. ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಬೀಳಲಿದೆ.
-ಎಚ್‌.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ

ಬರಹ ಇಷ್ಟವಾಯಿತೆ?

  • 35

    Happy
  • 3

    Amused
  • 2

    Sad
  • 0

    Frustrated
  • 3

    Angry

Comments:

0 comments

Write the first review for this !