ಗುರುವಾರ , ಆಗಸ್ಟ್ 22, 2019
21 °C
ಕೊಡಗಿನಲ್ಲಿ ಸಾಧಾರಣ ಮಳೆ

ಕೊಡಗಿನಲ್ಲಿ ನಾಳೆಯಿಂದ ಶಾಲಾ, ಕಾಲೇಜು ಆರಂಭ

Published:
Updated:

ಮಡಿಕೇರಿ: ಕೊಡಗಿನಲ್ಲಿ ಮಳೆ ಇಳಿಮುಖವಾಗಿದ್ದು, ಶುಕ್ರವಾರದಿಂದ ಶಾಲಾ– ಕಾಲೇಜುಗಳು ಆರಂಭಗೊಳ್ಳಲಿವೆ. ನಿರಾಶ್ರಿತರಿಗೆ ಪುನರ್ವಸತಿ ಕೇಂದ್ರಗಳನ್ನು ತೆರೆದಿರುವ ಅಂಗನವಾಡಿ, ಶಾಲಾ– ಕಾಲೇಜುಗಳಿಗೆ ಮಾತ್ರ ರಜೆ ವಿಸ್ತರಿಸಲಾಗಿದೆ.

ಜಿಲ್ಲೆಯ ವಿವಿಧೆಡೆ ಗುರುವಾರ ಸಾಧಾರಣ ಮಳೆಯಾಗಿದೆ. ಮಡಿಕೇರಿಯಲ್ಲಿ ಮಧ್ಯಾಹ್ನ 20 ನಿಮಿಷ ಜೋರು ಮಳೆ ಸುರಿಯಿತು. ಭಾಗಮಂಡಲ, ತಲಕಾವೇರಿ, ಚೇರಂಬಾಣೆ, ಅಪ್ಪಂಗಳ, ಚೆಟ್ಟಳ್ಳಿ, ಕಾಟಕೇರಿ, ಮೂರ್ನಾಡು, ಮದೆನಾಡು, ನಾಪೋಕ್ಲು ವ್ಯಾಪ್ತಿಯಲ್ಲಿ ಸಾಧಾರಣ ಮಳೆ ಸುರಿದಿದೆ.

ಕೊಡಗು ಜಿಲ್ಲೆಯ ಸುದ್ದಿ ಓದಲು www.prajavani.net/kodagu ಲಿಂಕ್ ಬಳಸಿ

Post Comments (+)