ಸುರಪುರ (ಯಾದಗಿರಿ ಜಿಲ್ಲೆ): ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಶಿಕ್ಷಕ ಶಿವಪುತ್ರಪ್ಪ ಸಂಗಪ್ಪ ಕೋಡ್ಲಾ (45) ಅವರು ಹೃದಯಾಘಾತದಿಂದ ಸೋಮವಾರ ನಿಧನರಾದರು.

ಇಲ್ಲಿನ ಪ್ರಭು ಕಾಲೇಜಿನಲ್ಲಿ ಚುನಾವಣಾ ಸಾಮಗ್ರಿಗಳನ್ನು ಪರಿಶೀಲಿಸುವ ಸಂದರ್ಭದಲ್ಲಿ ಅಸ್ವಸ್ಥಗೊಂಡರು. ತಕ್ಷಣ ಅವರನ್ನು ಆಂಬುಲೆನ್ಸ್‌ನಲ್ಲಿ ಕರೆತಂದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.

ತಾಲ್ಲೂಕಿನ ಮುಷ್ಠಳ್ಳಿ ಗ್ರಾಮದ 170ನೇ ಮತಗಟ್ಟೆಗೆ ಅವರನ್ನು ನಿಯೋಜಿಸಲಾಗಿತ್ತು.

ಕಲಬುರ್ಗಿ ಜಿಲ್ಲೆ ಆಳಂದ ತಾಲ್ಲೂಕಿನ ಕಣಮಸಗಗ್ರಾಮದಶಿವಪುತ್ರಪ್ಪ ಅವರು ಶಹಾಪುರ ತಾಲ್ಲೂಕಿನ ಹಳಿಸಗರ ಗ್ರಾಮದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರಿಗೆ ಪತ್ನಿ, ಪುತ್ರ ಇದ್ದಾರೆ. ಪತ್ನಿ ಮಹಾದೇವಿ ಶಹಾಪುರದ ಸಿಪಿಎಸ್ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.