ಬುಧವಾರ, ಏಪ್ರಿಲ್ 21, 2021
31 °C

ಅಕ್ಟೋಬರ್‌ 1ರೊಳಗೆ ಶಾಲೆಗಳಲ್ಲಿ ಶೌಚಾಲಯ ಕಡ್ಡಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಅಕ್ಟೋಬರ್‌ 1ರೊಳಗೆ ಶೌಚಾಲಯಗಳು ನಿರ್ಮಾಣವಾಗಿರಬೇಕು ಎಂಬ ಸೂಚನೆಯನ್ನು ಮುಖ್ಯ ಕಾರ್ಯದರ್ಶಿ ನೀಡಿದ್ದು, ಇದರ ಹೊಣೆಯನ್ನು ಡಿಡಿಪಿಐಗಳಿಗೆ ವಹಿಸಲಾಗಿದೆ. ತಪ್ಪಿದಲ್ಲಿ ಶಿಸ್ತಿನ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಈಚೆಗೆ 2018–19ನೇ ಸಾಲಿನ ಶೈಕ್ಷಣಿಕ ವರದಿ ಪ್ರಕಟಿಸಿತ್ತು. ಅದರಲ್ಲಿ ಇನ್ನೂ 2,794 ಪ್ರಾಥಮಿಕ ಶಾಲೆಗಳಲ್ಲಿ ಬಾಲಕರಿಗೆ ಶೌಚಾಲಯಗಳಿಲ್ಲ ಹಾಗೂ 1,288 ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯಗಳಿಲ್ಲ ಎಂಬ ಮಾಹಿತಿಯೂ ಇತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್‌ ಈ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

ನರೇಗಾ ನಿಧಿಯನ್ನಾದರೂ ಬಳಸಿಕೊಂಡು ಶೌಚಾಲಯ ನಿರ್ಮಿಸಬೇಕು, ನೀರಿನ ವ್ಯವಸ್ಥೆ ಮಾಡಬೇಕು. ಈ ಬಗ್ಗೆ ತಮಗೆ ವರದಿ ಸಲ್ಲಿಸಬೇಕು ಎಂದು ಮುಖ್ಯ ಕಾರ್ಯದರ್ಶಿಯವರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಲಾಖೆಯ ಆಯುಕ್ತರು ಎಲ್ಲ ಡಿಡಿಪಿಐಗಳಿಗೆ ಮಾಹಿತಿ ರವಾನಿಸಿ, ಕಾಮಗಾರಿಯ ಪ್ರಗತಿಯ ಬಗ್ಗೆ ತಿಳಿಯುವ ಸಲುವಾಗಿ ಪ್ರತಿ ಜಿಲ್ಲೆಯಲ್ಲಿ ವಾಟ್ಸ್‌ಆ್ಯಪ್‌ ಗುಂಪು ಮಾಡಿಕೊಳ್ಳಲು ಸೂಚಿಸಿದ್ದಾರೆ.

ರಾಜ್ಯದಲ್ಲಿ 43,492 ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದು, 4,696 ಸರ್ಕಾರಿ ಪ್ರೌಢಶಾಲೆಗಳಿವೆ. ಪ್ರೌಢಶಾಲೆಗಳ ಪೈಕಿ 153ರಲ್ಲಿ ಬಾಲಕರಿಗೆ ಹಾಗೂ 64ರಲ್ಲಿ ಬಾಲಕಿಯರಿಗೆ ಶೌಚಾಲಯಗಳಿಲ್ಲ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು