ಭಾನುವಾರ, ಜೂಲೈ 5, 2020
23 °C

ಶಾಲಾ ಕಚೇರಿಗಳು ಇದೇ 5ರಿಂದ ಪ್ರಾರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿರ್ದೇಶನದಂತೆ ಕೇಂದ್ರದ ಮಾರ್ಗಸೂಚಿಯ ಆಧಾರದಲ್ಲಿ ಜುಲೈ 1 ರಿಂದ ಹಂತಹಂತವಾಗಿ ಶಾಲೆಗಳನ್ನು ತೆರೆಯಲು ಪೋಷಕರ ಅಭಿಪ್ರಾಯ ಸಂಗ್ರಹಕ್ಕಾಗಿ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆಯನ್ನು ಹೊರಡಿಸಿದ್ದಾರೆ.

ಇದೇ 5ರಿಂದಲೇ ರಾಜ್ಯದ ಎಲ್ಲ ಸರ್ಕಾರಿ‌ ಶಾಲೆಗಳಲ್ಲಿ ಕಚೇರಿ ಸಿಬ್ಬಂದಿ ಕರ್ತವ್ಯಕ್ಕೆ‌ ಹಾಜರಾಗಲಿದ್ದಾರೆ. ಜೂನ್ 8ರಿಂದ ಶಾಲಾ ದಾಖಲಾತಿ ಪ್ರಕ್ರಿಯೆಯನ್ನು ಆರಂಭಿಸಲಿದ್ದಾರೆ.

ಶೈಕ್ಷಣಿಕ ತಯಾರಿಗೆ ಜೂನ್‌ ತಿಂಗಳನ್ನು ಸದ್ಬಳಕೆ ಮಾಡಿಕೊಂಡು ಮುಂದಿನ ದಿನಗಳ ಪರಿಸ್ಥಿತಿಯ ಆಧಾರದಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಸರ್ಕಾರದ ಕಾಲಕಾಲಿಕ ನಿರ್ದೇಶನದಂತೆ ಕ್ರಮ ವಹಿಸಬೇಕು ಎಂದು ಇಲಾಖೆ ಸೂಚಿಸಿದೆ. ಜೂನ್ 8ರಿಂದ ಅನುದಾನ ರಹಿತ ಖಾಸಗಿ ಶಾಲಾ ಕಚೇರಿಗಳ ಆರಂಭಕ್ಕೂ ಅನುಮತಿಸಲಾಗಿದೆ. 

ಪೋಷಕರ‌ ಅಭಿಪ್ರಾಯವನ್ನು ಜೂನ್ 15ರ ಒಳಗೆ ನಿಗದಿತ ನಮೂನೆಯಲ್ಲಿ ದಾಖಲಿಸಲು ಸೂಚಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು