22 ಪ್ರಾದೇಶಿಕ ವಿಜ್ಞಾನ ಕೇಂದ್ರಗಳ ಸ್ಥಾಪನೆ: ಜಿ ಪರಮೇಶ್ವರ

7

22 ಪ್ರಾದೇಶಿಕ ವಿಜ್ಞಾನ ಕೇಂದ್ರಗಳ ಸ್ಥಾಪನೆ: ಜಿ ಪರಮೇಶ್ವರ

Published:
Updated:

ಬೆಂಗಳೂರು: ರಾಜ್ಯದಲ್ಲಿ 22 ಪ್ರಾದೇಶಿಕ ವಿಜ್ಞಾನ ಕೇಂದ್ರಗಳು ಮತ್ತು ಮೈಸೂರಿನಲ್ಲಿ ₹198 ಕೋಟಿ ವೆಚ್ಚದಲ್ಲಿ ಸೈನ್ಸ್‌ ಸಿಟಿ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಹೇಳಿದರು.

ಎನ್‌ಎಂಕೆಆರ್‌ವಿ ಮಹಿಳಾ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ 11 ನೇ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.

ವಿಜ್ಞಾನದ ವಿದ್ಯಾರ್ಥಿಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಇಂದಿನ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರವನ್ನು ಸಂಶೋಧನೆ ಮೂಲಕವೇ ಕಂಡುಕೊಳ್ಳಬೇಕು. ಉತ್ತಮ ಸಂಶೋಧನೆಗಳಿಗೆ ರಾಜ್ಯ ಸರ್ಕಾರ ₹ 5 ಲಕ್ಷ ದಿಂದ ₹ 50 ಲಕ್ಷದವರೆಗೆ ಪ್ರೋತ್ಸಾಹ ಧನ ನೀಡಲಿದೆ ಎಂದರು. ಕಾರ್ಯಕ್ರಮದಲ್ಲಿ ಡಾ.ಬಿ.ವಿ.ಶ್ರೀಕಂಠನ್‌ ಅವರಿಗೆ ಜೀವಮಾನದ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !