ಲೋಕಸಭಾ ಚುನಾವಣೆ; ಸೀಟು ಹಂಚಿಕೆ ಕುರಿತು 10ರಂದು ಸಭೆ

7
ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿಕೆ;

ಲೋಕಸಭಾ ಚುನಾವಣೆ; ಸೀಟು ಹಂಚಿಕೆ ಕುರಿತು 10ರಂದು ಸಭೆ

Published:
Updated:

ಬೆಳಗಾವಿ: ‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ಕುರಿತು ಜೆಡಿಎಸ್‌ ಜೊತೆ ಇದೇ ತಿಂಗಳ 10ರಂದು ಮಾತುಕತೆ ನಡೆಸಲಿದ್ದೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದರು.

ತಾಲ್ಲೂಕಿನ ಹುದಲಿ ಗ್ರಾಮದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಗೆಲ್ಲುವ ಸಾಮರ್ಥ್ಯವನ್ನು ಆಧರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನಡೆದ ಉಪ–ಚುನಾವಣೆಯಲ್ಲಿ ಕಾಂಗ್ರೆಸ್‌ ಬಲಿಷ್ಠವಾಗಿದ್ದರೂ, ಜೆಡಿಎಸ್‌ನ ಮಧು ಬಂಗಾರಪ್ಪ ಅವರಿಗೆ ಸೀಟು ಬಿಟ್ಟುಕೊಟ್ಟಿದ್ದೇವು’ ಎಂದು ತಿಳಿಸಿದರು.

‘ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸುಮಲತಾ ಅಂಬರೀಷ್‌ ಅವರ ಕೊಡುಗೆ ಕುರಿತು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಏನನ್ನೂ ಹೇಳಿಲ್ಲ. ಅವರ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ‘ ಎಂದು ಹೇಳಿದರು.

‘ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾದ ನಾಲ್ಕು ಜನ ಶಾಸಕರಿಗೆ ನೋಟಿಸ್‌ ನೀಡಲಾಗಿದ್ದು, ಶೀಘ್ರದಲ್ಲಿ ಉತ್ತರಿಸುವಂತೆ ಸೂಚಿಸಲಾಗಿದೆ. ಸದ್ಯದಲ್ಲಿಯೇ ಮತ್ತೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗುವುದು, ಹಾಜರಾಗುವಂತೆ ಎಲ್ಲರಿಗೂ ವಿಪ್‌ ನೀಡಲಾಗುವುದು. ಯಾರಾದರೂ ಗೈರಾದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕ್ರಮಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !