ಸೋಮವಾರ, ಫೆಬ್ರವರಿ 17, 2020
18 °C

ಕಾವಲುಗಾರನಿಂದ ಬಾಲಕಿ ಮೇಲೆ ಅತ್ಯಾಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ರಾಯಚೂರು: ನಗರದಲ್ಲಿ ಆಶ್ರಯ ಪಡೆದಿದ್ದ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಅನಾಥ ಬಾಲಕಿಯ ಮೇಲೆ ಕಾವಲುಗಾರ ಸಿದ್ದಯ್ಯ ಎನ್ನುವ ಯುವಕ ಶಾಲೆಗೆ ಬಿಟ್ಟುಬರುವ ನೆಪದಲ್ಲಿ ಅತ್ಯಾಚಾರ ಎಸಗಿರುವ ಪ್ರಕರಣ ಎರಡು ತಿಂಗಳ ಬಳಿಕ ಬೆಳಕಿಗೆ ಬಂದಿದೆ.

ಆರೋಪಿ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ಆರಂಭಿಸಿದ್ದಾರೆ.

ನವೆಂಬರ್‌ನಲ್ಲಿ ಅತ್ಯಾಚಾರ ನಡೆದಿದೆ ಎಂದು ಬಾಲಕಿಯ ಸಹೋದರ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ಸಲ್ಲಿಸಿದ್ದರು. ಆದರೆ, ಅಧಿಕಾರಿಗಳು ತನಿಖೆ ನಡೆಸದೆ ನಿರ್ಲಕ್ಷ್ಯ ವಹಿಸಿದ್ದರು. ಈ ಸಂಬಂಧ ಆಶ್ರಯ ಕೇಂದ್ರದ ಮೇಲ್ವಿಚಾರಕ ಸಯ್ಯದ್‌ ಪಾಷಾ‌ ಅವರನ್ನು ಜಿಲ್ಲಾಧಿಕಾರಿ ಆರ್‌.ವೆಂಕಟೇಶ ಕುಮಾರ್‌ ಅಮಾನತುಗೊಳಿಸಿದ್ದಾರೆ. ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗುರುಪ್ರಸಾದ್‌ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸು ಮಾಡಿದ್ದಾರೆ.

ಜನವರಿ 30ರಂದು ಮಕ್ಕಳ ರಕ್ಷಣಾ ಘಟಕದಿಂದ ಮಹಿಳಾ ಠಾಣೆಗೆ ದೂರು ಸಲ್ಲಿಕೆಯಾಗಿತ್ತು. ಇದರಿಂದ ಎಚ್ಚೆತ್ತ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಶುಕ್ರವಾರ ವಿದ್ಯಾರ್ಥಿನಿಯಿಂದ ಮಾಹಿತಿ ಪಡೆದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು