ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ಣಯ ಹಿಂಪಡೆದ ಹುಬ್ಬಳ್ಳಿ ವಕೀಲರ ಸಂಘ

Last Updated 27 ಫೆಬ್ರುವರಿ 2020, 19:31 IST
ಅಕ್ಷರ ಗಾತ್ರ

ಬೆಂಗಳೂರು: ‘ಪಾಕಿಸ್ತಾನ್‌ ಜಿಂದಾ ಬಾದ್‌ ಘೋಷಣೆ ಕೂಗಿದ ಆರೋಪ ಎದುರಿಸುತ್ತಿರುವ ಹುಬ್ಬಳ್ಳಿಯ ಕೆಎಲ್‌ಇ ಎಂಜಿನಿಯರಿಂಗ್ ಕಾಲೇಜಿನ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಪರ ವಕಾಲತ್ತು ವಹಿಸದಂತೆ ಕೈಗೊಂಡಿದ್ದ ನಿರ್ಣಯವನ್ನು ಹಿಂಪಡೆಯಲಾಗಿದೆ’ ಎಂದು ಹುಬ್ಬಳ್ಳಿ ವಕೀಲರ ಸಂಘ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾ ಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ಕೆ. ನಾವದಗಿ, ‘ವಿವಾದ ಇತ್ಯರ್ಥಕ್ಕೆ ಹುಬ್ಬಳ್ಳಿ ವಕೀಲರ ಸಂಘದ ಪದಾಧಿಕಾರಿಗಳೊಂದಿಗೆ ಸೌಹಾರ್ದ ಮಾತುಕತೆ ನಡೆಸಲಾಗಿದೆ. ಪರಿಣಾಮ ಬಂಧಿತ ಆರೋಪಿಗಳ ಪರ ವಕಾಲತ್ತು ವಹಿಸದಂತೆ ಕೈಗೊಂಡಿದ್ದ ನಿರ್ಣಯವನ್ನು ಸಂಘವು ಹಿಂಪಡೆದಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಆರೋಪಿಗಳ ಪರ ವಕಾಲತ್ತು ವಹಿಸುವ ವಕೀಲರಿಗೆ ಅಗತ್ಯ ಭದ್ರತೆ ಒದಗಿಸಬೇಕು’ ಎಂದು ಹುಬ್ಬಳ್ಳಿ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT