ಮಂಗಳವಾರ, ಜೂನ್ 22, 2021
28 °C
ನಾಳೆ ಮಧ್ಯಾಹ್ನ ವಿಚಾರಣೆ

ಅನರ್ಹ ಶಾಸಕರ ವಿರುದ್ದ ದೇಶದ್ರೋಹ ಆರೋಪದಡಿ ಖಾಸಗಿ ದೂರು: ನಾಳೆ ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 17 ಮಂದಿ ಅನರ್ಹ ಶಾಸಕರು ಮತ್ತು ಇತರ ಕೆಲವು ವ್ಯಕ್ತಿಗಳ ವಿರುದ್ದ ದೇಶದ್ರೋಹ ಆರೋಪದಡಿ ಎನ್‌ಐಎ (ರಾಷ್ಟ್ರೀಯ ತನಿಖಾ ದಳ) ವಿಶೇಷ ನ್ಯಾಯಾಲಯದಲ್ಲಿ ಸೋಮವಾರ ಖಾಸಗಿ ದೂರು ದಾಖಲಾಗಿದೆ. ಹಿರಿಯ ವಕೀಲ ಬಾಲನ್‌ ಅವರು ದೂರು ದಾಖಲಿಸಿದ್ದಾರೆ.

ಮಂಗಳವಾರ ಮಧ್ಯಾಹ್ನ ಪ್ರಕರಣದ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.

‘ಅಪರೇಷನ್ ಕಮಲಕ್ಕೆ ಸಾವಿರಾರು‌ ಕೋಟಿ ರೂಪಾಯಿ ಹಣ ವೆಚ್ಚ ಮಾಡಲಾಗಿದೆ. ಇದಕ್ಕೆ ಅಕ್ರಮ ಹಣ ಬಳಕೆ ಮಾಡಲಾಗಿದೆ. ಈ ಹಣ ಎಲ್ಲಿಂದ ಬಂತು ಎಂಬ ಬಗ್ಗೆ ತನಿಖೆ ನಡೆಯಬೇಕು. ಅನರ್ಹ ಶಾಸಕರಿಂದಲೇ ಬಿಜೆಪಿ ಸರ್ಕಾರ ರಚನೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಹೇಳಿಕೆ ನೀಡಿದ್ದಾರೆ. ಅನರ್ಹ ಶಾಸಕರು ಬಿಜೆಪಿ ಸೇರಿದ ಕೂಡಲೇ ಮಂತ್ರಿಗಳಾಗುತ್ತಾರೆ ಎಂದೂ ಹೇಳಿದ್ದಾರೆ. ರಾಜಕೀಯ ಪಕ್ಷಗಳಿಗೆ ಭಯೋತ್ಪಾದಕ ಶಕ್ತಿಗಳಿಂದ ಹಣ ಬರುತ್ತಿದೆ ಎಂಬ ಆರೋಪವಿದೆ. ಈ ಹಣದ ಮೂಲದ ಬಗ್ಗೆ ತನಿಖೆ ನಡೆಯಬೇಕು’ ಎಂದು ಬಾಲನ್ ಆರೋಪಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು