ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕಲಿ ಬಿತ್ತನೆ ಬೀಜ ಮಾರಾಟ–ಕೃಷಿ ಸಚಿವರ ಎಚ್ಚರಿಕೆ

Last Updated 24 ಏಪ್ರಿಲ್ 2020, 20:39 IST
ಅಕ್ಷರ ಗಾತ್ರ

ಬೆಂಗಳೂರು: ‘ನಕಲಿ ಬೀಜಗಳನ್ನು ಮಾರಾಟ ಮಾಡುವುದು ರೈತರ ಬದುಕನ್ನು ಸಾಯಿಸುವಂತಹ ಮಹಾಪರಾಧವಾಗಿದೆ. ಇಂತಹ ಮಾರಾಟಗಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಎಚ್ಚರಿಸಿದರು.

ಹಾವೇರಿ ಜಿಲ್ಲಾ ಕೃಷಿ ಅಧಿಕಾರಿಗಳ ತಂಡ ಸುಮಾರು ₹ 6 ಕೋಟಿ ಮೌಲ್ಯದ ಅಕ್ರಮ ಬಿಡಿ ಬೀಜಗಳ ದಾಸ್ತಾನು ವಶಪಡಿಸಿಕೊಂಡಿದ್ದು, ಕೃಷಿ ಅಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

‘ಕಳಪೆ ನಕಲಿ ಬೀಜ ಮಾರಾಟ ಮಾಡುವವರು ಬದುಕಿದ್ದಂತಹ ರೈತರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ‌. ಇಂತಹ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ. ಕೃಷಿ ಅಧಿಕಾರಿಗಳು ಮತ್ತು ವಿಚಕ್ಷಣಾ ತಂಡ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದ್ದಾರೆ. ನಕಲಿ, ಕಳಪೆ, ಅಕ್ರಮ ಬೀಜ ಅಥವಾ ಗೊಬ್ಬರ ಮಾರಾಟ ಮಾಡುವವರು ಎಷ್ಟೇ ಪ್ರಭಾವಿಗಳಾದರೂ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT