ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀರಶೈವರಿಗೆ ಶೇ 16ರಷ್ಟು ಮೀಸಲಾತಿ ಕೊಡಿ

ಬಸವ ಜಯ ಮೃತ್ಯುಂಜಯ ಸ್ವಾಮೀಜಿ
Last Updated 8 ಜನವರಿ 2020, 20:00 IST
ಅಕ್ಷರ ಗಾತ್ರ

ಬೆಂಗಳೂರು: ವೀರಶೈವ ಲಿಂಗಾಯತ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿ ನೀಡಬೇಕು ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಮಹಾಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು.

ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆಯಲ್ಲಿ ಪಂಚಮಸಾಲಿ ಸಮುದಾಯದ 15 ಶಾಸಕರಿದ್ದು, ಮುರುಗೇಶ ನಿರಾಣಿ ಹಾಗೂ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದೂ ಅವರು ಆಗ್ರಹಿಸಿದರು.

ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರ ಒಂದು ಲಕ್ಷ ಕೋಟಿ ಅನುದಾನ ಬಿಡುಗಡೆ ಮಾಡಬೇಕು.ಕೃಷ್ಣಾ ಮತ್ತು ಮಹದಾಯಿ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ನೀರಾವರಿ ಯೋಜನೆಗೆ ಒತ್ತು ನೀಡಬೇಕು ಎಂದು ಹೇಳಿದರು.

ಮಠದ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್‌ ನೀಡುವ ‘ರಾಷ್ಟ್ರೀಯ ಬಸವ ಕೃಷಿ ಪ್ರಶಸ್ತಿ’ಗೆ ತೆಲಂಗಾಣದ ಜಲಸಂಪನ್ಮೂಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಪ್ರಕಾಶರಾವ್‌ ವೀರಮಲ್ಲ ಆಯ್ಕೆಯಾಗಿದ್ದಾರೆ ಎಂದು ಸ್ವಾಮೀಜಿ ತಿಳಿಸಿದರು.

‘ಪ್ರಶಸ್ತಿ ₹1 ಲಕ್ಷ ನಗದು ಹಾಗೂ ತಾಮ್ರಪತ್ರ ಸ್ಮರಣಿಕೆ ಒಳಗೊಂಡಿದೆ. ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದ ಬಸವ ಸಭಾಭವನದಲ್ಲಿ ಇದೇ 14ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ‘10ನೇ ಕೃಷಿ ಸಂಕ್ರಾಂತಿ’ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಉದ್ಘಾಟಿಸಲಿದ್ದಾರೆ’ ಎಂದರು.

‘ಬಸವ ತತ್ವಗಳ ಪ್ರಚಾರಕ್ಕಾಗಿ ಅದೇ ದಿನ ಜಾಗತಿಕ ಬಸವ ಶಾಂತಿ ಕೇಂದ್ರ ತೆರೆಯಲಾಗುವುದು. ಸಂಜೆ 4 ಗಂಟೆಗೆ ಉತ್ತರ ಕರ್ನಾಟಕ ಸಮಗ್ರ ನೀರಾವರಿ ಅನುಷ್ಠಾನ ಕುರಿತು ದುಂಡುಮೇಜಿನ ಸಭೆ ಹಾಗೂ ಸಂವಾದ ನಡೆಯಲಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT