ರಾಘವೇಶ್ವರ ಸ್ವಾಮೀಜಿ ವಿರುದ್ಧದ ಅರ್ಜಿ ಇಂದು ವಿಚಾರಣೆ

7

ರಾಘವೇಶ್ವರ ಸ್ವಾಮೀಜಿ ವಿರುದ್ಧದ ಅರ್ಜಿ ಇಂದು ವಿಚಾರಣೆ

Published:
Updated:

ಬೆಂಗಳೂರು: ಹೊಸನಗರದ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಶ್ರೀಗಳನ್ನು ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸಿರುವ ಸೆಷನ್ಸ್‌ ನ್ಯಾಯಾಲಯದ ಆದೇಶ ಪ್ರಶ್ನಿಸಿರುವ ಅರ್ಜಿ ಮಂಗಳವಾರ (ಆ.14) ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ. 

ಈ ಕುರಿತಂತೆ ಸಂತ್ರಸ್ತೆ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಆರ್‌.ಬಿ.ಬೂದಿಹಾಳ್‌ ಅವರ ಏಕಸದಸ್ಯ ನ್ಯಾಯಪೀಠ ವಿಚಾರಣೆಗೆ ದೈನಂದಿನ ಕಲಾಪ ಪಟ್ಟಿಯಲ್ಲಿ ನಿಗದಿಪಡಿಸಿದೆ. 

‘ಸ್ವಾಮೀಜಿ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಈ ಬಗ್ಗೆ ಸೂಕ್ತ ಸಾಕ್ಷಾಧಾರಗಳಿವೆ. ಪ್ರಕರಣದಲ್ಲಿ ಪೊಲೀಸರು ಸಾಮೀಜಿ ವಿರುದ್ಧ ಸಿಐಡಿ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಆದರೂ, ಅವರು ಅತ್ಯಾಚಾರ ನಡೆಸಿದ ಬಗ್ಗೆ ಸಾಕ್ಷಾಧಾರಗಳಿಲ್ಲ ಎಂದು ಸೆಷನ್ಸ್ ನ್ಯಾಯಾಧೀಶ ಜಿ.ಬಿ.ಮುದಿಗೌಡರ್‌ ಅಭಿಪ್ರಾಯಪಟ್ಟಿದ್ದಾರೆ. ಇದು ತಪ್ಪು’ ಎಂಬುದು ಅರ್ಜಿದಾರರ ವಾದ.

‘ಸ್ವಾಮೀಜಿ ಅವರನ್ನು ಆರೋಪದಿಂದ ಮುಕ್ತಗೊಳಿಸಿ ಮುದಿಗೌಡರ್ 2016ರ ಮಾರ್ಚ್ 31ರಂದು ಹೊರಡಿಸಿದ ಆದೇಶ ರದ್ದುಗೊಳಿಸಬೇಕು’ ಎಂದು ಕೋರಿ ಸಂತ್ರಸ್ತೆ ಈ ಮೇಲ್ಮನವಿ ಸಲ್ಲಿಸಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !