ಆರೋಗ್ಯ ಕಾರ್ಡ್‌ಗೆ ನಿಂತಿದ್ದ ಹಿರಿಯ ವ್ಯಕ್ತಿ ಸಾವು

ಶುಕ್ರವಾರ, ಏಪ್ರಿಲ್ 26, 2019
31 °C
ಕಾರವಾರದ ಜಿಲ್ಲಾ ಆಸ್ಪತ್ರೆಯಲ್ಲಿ ಬೆಳಿಗ್ಗೆ 7ರಿಂದ ಸಾಲಿನಲ್ಲಿ ನಿಂತಿದ್ದರು

ಆರೋಗ್ಯ ಕಾರ್ಡ್‌ಗೆ ನಿಂತಿದ್ದ ಹಿರಿಯ ವ್ಯಕ್ತಿ ಸಾವು

Published:
Updated:
Prajavani

ಕಾರವಾರ: ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ‘ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ’ ಆರೋಗ್ಯ ಕಾರ್ಡ್‌ಗಾಗಿ ಸಾಲಿನಲ್ಲಿ ನಿಂತಿದ್ದ ಹಿರಿಯ ವ್ಯಕ್ತಿಯೊಬ್ಬರು ಬುಧವಾರ ಕುಸಿದು ಬಿದ್ದು ಮೃತಪಟ್ಟಿದ್ದಾರೆ. 

ಕಾರವಾರ ತಾಲ್ಲೂಕಿನ ಮುದಗಾ ನಿವಾಸಿ ತುಕಾರಾಮ ತಾಂಡೇಲ್ (64) ಮೃತರು. ಜಿಲ್ಲಾ ಆಸ್ಪತ್ರೆಯಲ್ಲಿ ಬೆಳಿಗ್ಗೆ 10ರಿಂದ ಆರೋಗ್ಯ ಕಾರ್ಡ್‌ಗೆ ನೋಂದಣಿ ಮತ್ತು ವಿತರಣೆ ಮಾಡಲಾಗುತ್ತಿದೆ. ಬೆಳಿಗ್ಗೆ 7 ಗಂಟೆಯಿಂದಲೇ ಸಾಲಿನಲ್ಲಿ ಕಾಯುತ್ತಿದ್ದ ತುಕಾರಾಮ, ಅಸ್ವಸ್ಥಗೊಂಡು ಕುಸಿದು ಬಿದ್ದರು. ತಕ್ಷಣ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸಲಿಲ್ಲ.

ಕಾರ್ಡ್ ಪಡೆದುಕೊಳ್ಳಲು ಸ್ಥಳದಲ್ಲಿ ಸೂಕ್ತ ವ್ಯವಸ್ಥೆ ಮಾಡಿಲ್ಲ ಎಂದು ಸೇರಿದ್ದ ಜನರು ಆಕ್ರೋಶ ವ್ಯಕ್ತಪಡಿಸಿದರು. ಆಸ್ಪತ್ರೆಯ ಆವರಣದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರನ್ನು ನಿಯೋಜಿಸಲಾಗಿದ್ದು, ನೂಕುನುಗ್ಗಲು ನಿಯಂತ್ರಿಸುತ್ತಿದ್ದಾರೆ.

ಆಯುಷ್ಮಾನ್ ಕಾರ್ಡ್‌ಗಾಗಿ ಆಸ್ಪತ್ರೆ ಬಳಿ ಕಳೆದ ಕೆಲವು ದಿನಗಳಿಂದ ಪ್ರತಿನಿತ್ಯ ಬೆಳಿಗ್ಗೆಯಿಂದಲೇ ಜನರು ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಬುಧವಾರವೂ 500ಕ್ಕೂ ಹೆಚ್ಚು ಜನರು ನಿಂತಿದ್ದರು. ಆಸ್ಪತ್ರೆಯಲ್ಲಿ ನಾಲ್ಕು ಕೌಂಟರ್‌ಗಳನ್ನು ತೆರೆಯಲಾಗಿದ್ದು, ಅರ್ಜಿ ಹಾಗೂ ದಾಖಲೆಗಳನ್ನು ಪರಿಶೀಲಿಸಿ, ಕಾರ್ಡ್ ಮುದ್ರಿಸಿ ವಿತರಣೆ ಮಾಡಲಾಗುತ್ತಿದೆ. ಹಿರಿಯ ನಾಗರಿಕರಿಗಾಗಿ ಒಂದು ಕೌಂಟರ್ ಅನ್ನು ಮೀಸಲಿಡಲಾಗಿದೆ. ಜಿಲ್ಲಾ ಆಸ್ಪತ್ರೆಯೂ ಸೇರಿದಂತೆ ಜಿಲ್ಲೆಯ ಬೇರೆ ಬೇರೆ ಕೇಂದ್ರಗಳಲ್ಲಿ ಕಾರ್ಡ್ ವಿತರಣೆ ಮಾಡಲಾಗುತ್ತಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 3

  Angry

Comments:

0 comments

Write the first review for this !