ಪ್ರತ್ಯೇಕ ರಾಜ್ಯಕ್ಕಾಗಿ ಮೊಳಗಿದ ಘೋಷಣೆ

7

ಪ್ರತ್ಯೇಕ ರಾಜ್ಯಕ್ಕಾಗಿ ಮೊಳಗಿದ ಘೋಷಣೆ

Published:
Updated:

ಬೆಳಗಾವಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಘೋಷಣೆಗೆ ಆಗ್ರಹಿಸಿ ಉತ್ತರ ಕರ್ನಾಟಕ ಹೋರಾಟ ಸಮಿತಿಯ ಸದಸ್ಯರು ಸುವರ್ಣ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತ್ಯೇಕ ಧ್ವಜಾರೋಹಣ ಮಾಡುವುದಾಗಿ ತಿಳಿಸಿರುವ ಅವರು, ಪೊಲೀಸರು ಧ್ವಜ ಕಸಿದುಕೊಂಡಿದ್ದಾರೆ ಎಂದು ಆರೋಪಿಸಿದರು.

ಧ್ವಜ ಹಾರಿಸುವ ಕುರಿತು ಸ್ವಾಮೀಜಿಗಳೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.

13 ಜಿಲ್ಲೆಗಳ ನಕ್ಷೆ ಒಳಗೊಂಡ ಧ್ವಜ ಸಿದ್ಧಪಡಿಸಿದ್ದೇವೆ. ಅದನ್ನು ಕಸಿದುಕೊಂಡು ಪೊಲೀಸರು ನಮ್ಮ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಅಡಿವೇಶ ಇಟಗಿ ದೂರಿದರು.

ಬರಹ ಇಷ್ಟವಾಯಿತೆ?

 • 26

  Happy
 • 0

  Amused
 • 0

  Sad
 • 1

  Frustrated
 • 3

  Angry

Comments:

0 comments

Write the first review for this !