ಬೆಳಗಾವಿ: ಖಾನಾಪುರ ತಾಲ್ಲೂಕಿನ ಬೋಗೂರು ಗ್ರಾಮದ ಬಳಿಯ ಬೋಗೂರು-ಇಟಗಿ ರಸ್ತೆಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ರಸ್ತೆ ಭೀಕರ ಅಪಘಾತದಲ್ಲಿ 7 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಕಬ್ಬು ಕಟಾವಿಗಾಗಿ ಬೋಗೂರಿನಿಂದ ಟ್ರ್ಯಾಕ್ಟರ್ನಲ್ಲಿ ಇಟಗಿ ಗ್ರಾಮದತ್ತ ಹೋಗುವ ಮಾರ್ಗ ಮಧ್ಯೆ ತಟ್ಟಿ ಹಳ್ಳದ ಸೇತುವೆ ಬಳಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ಕಳೆದುಕೊಂಡ ಟ್ರ್ಯಾಕ್ಟರ್ ಹಳ್ಳಕ್ಕೆ ಉರುಳಿ ಬಿದ್ದಿದೆ ಎಂದು ಮೂಲಗಳು ತಿಳಿಸಿವೆ.

ಈ ವೇಳೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಇನ್ನೂ 10 ಮಂದಿಯ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನು ಇಟಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಗಿದೆ.

ಮೃತರು ಮತ್ತು ಗಾಯಗೊಂಡವರು ಬೋಗೂರು ಗ್ರಾಮದವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.