ಬುಧವಾರ, ಆಗಸ್ಟ್ 4, 2021
21 °C
ಒಂದೇ ದಿನ ಐವರ ಸಾವು

7 ಸಾವಿರ ಸೋಂಕಿತರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಸೋಂಕಿನಿಂದ ರಾಜ್ಯದಲ್ಲಿ ಮತ್ತೆ ಐವರು ಮೃತಪಟ್ಟಿರುವುದು ಭಾನುವಾರ ದೃಢಪಟ್ಟಿದ್ದು, ಕೋವಿಡ್‌ನಿಂದ ಸಾವಿಗೀಡಾದವರ ಸಂಖ್ಯೆ 86ಕ್ಕೆ ಏರಿಕೆಯಾಗಿದೆ. ಹೊಸದಾಗಿ 176 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 7 ಸಾವಿರದ ಗಡಿ ತಲುಪಿದೆ. 

ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ 1,548 ಮಂದಿ ಕೋವಿಡ್ ಪೀಡಿತರಾಗಿದ್ದು, 25 ಮಂದಿ ಮೃತಪಟ್ಟಿದ್ದಾರೆ. ಬಹುತೇಕ ಪ್ರಕರಣ
ಗಳಲ್ಲಿ ಸೋಂಕಿನ ಲಕ್ಷಣಗಳೇ ಗೋಚರಿಸದಿರುವುದು ಆತಂಕಕ್ಕೆ ಕಾರಣವಾಗಿದೆ. ಹೊಸದಾಗಿ ವರದಿಯಾದ ಪ್ರಕರಣಗಳಲ್ಲಿ 88 ಮಂದಿ ಅನ್ಯರಾಜ್ಯಗಳಿಂದ ಬಂದವರಾಗಿದ್ದಾರೆ. ಬೆಂಗಳೂರಿನಲ್ಲಿ ಮೂವರು, ದಕ್ಷಿಣ ಕನ್ನಡ ಹಾಗೂ ಬೀದರ್‌ನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಸದ್ಯ 16 ರೋಗಿಗಳು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಬೆಂಗಳೂರಿನಲ್ಲಿ 42, ಯಾದಗಿರಿಯಲ್ಲಿ 22, ಉಡುಪಿಯಲ್ಲಿ 21, ಬೀದರ್‌ನಲ್ಲಿ 20,ಕಲಬುರ್ಗಿಯಲ್ಲಿ 13, ಧಾರವಾಡದಲ್ಲಿ 10, ಬಳ್ಳಾರಿಯಲ್ಲಿ 8, ಕೋಲಾರದಲ್ಲಿ 7, ಉತ್ತರ ಕನ್ನಡದಲ್ಲಿ 6, ಮಂಡ್ಯದಲ್ಲಿ 5, ದಕ್ಷಿಣ ಕನ್ನಡದಲ್ಲಿ 5, ಬಾಗಲಕೋಟೆಯಲ್ಲಿ 4, ರಾಮನಗರದಲ್ಲಿ 3, ರಾಯಚೂರಿನಲ್ಲಿ 2, ಶಿವಮೊಗ್ಗದಲ್ಲಿ 2 ಹಾಗೂ ಬೆಳಗಾವಿ, ಹಾಸನ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಹಾವೇರಿಯಲ್ಲಿ ತಲಾ ಒಂದು ಸೋಂಕು ಪ್ರಕರಣ ಹೊಸದಾಗಿ ವರದಿಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು