ಮಂಗಳವಾರ, ಜನವರಿ 28, 2020
25 °C

ಲೈಂಗಿಕ ಕಿರುಕುಳ ಆರೋಪ: ಮುಖ್ಯ ಶಿಕ್ಷಕ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮದುರ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಾಲ್ಲೂಕಿನ ಕಟಕೋಳ ಸರ್ಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಎಫ್‌.ಐ.ಖಾಜಿ ಅವರನ್ನು ಅಮಾನತುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಎ.ಬಿ. ಪುಂಡಲೀಕ ಆದೇಶ ಹೊರಡಿಸಿದ್ದಾರೆ.

ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ ದೂರು ಬಂದಿತ್ತು. ಬಳಿಕ, ಜಿಲ್ಲಾ ಮಕ್ಕಳ ಶಿಕ್ಷಣಾಧಿಕಾರಿ ಹಾಗೂ ಮಕ್ಕಳ ಸಹಾಯವಾಣಿ ಕೇಂದ್ರದ ಸಿಬ್ಬಂದಿ ಶಾಲೆಗೆ ಭೇಟಿ ನೀಡಿದ್ದಾಗ ವಿದ್ಯಾರ್ಥಿಗಳು ಹಾಗೂ ಎಸ್‌ಡಿಎಂಸಿ ಸದಸ್ಯರು ಲಿಖಿತ ದೂರು ನೀಡಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು