ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರಿಗೆ ಬಜೆಟ್‌ ಕೊಡುಗೆ: ಹೆಣ್ಣುಮಕ್ಕಳ ಹೆಸರಲ್ಲಿ 1.26ಕೋಟಿ ಬ್ಯಾಂಕ್‌ ಖಾತೆ

Last Updated 2 ಜುಲೈ 2019, 9:59 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ಉಜ್ವಲಾ ಯೋಜನೆಯ ಅಡಿಯಲ್ಲಿ 8 ಕೋಟಿ ಉಚಿತ ಅಡುಗೆ ಅನಿಲ ಸಂಪರ್ಕ ನೀಡಲಾಗುವುದು ಎಂದು ಹಣಕಾಸು ಸಚಿವ ಅರುಣ್‌ ಜೇಟ್ಲಿ ಹೇಳಿದ್ದಾರೆ.

5 ಕೋಟಿ ಬಡ ಮಹಿಳೆಯರನ್ನು ಹೊಗೆ ಮತ್ತು ಕಟ್ಟಿಗೆ ಒಲೆಯಿಂದ ಮುಕ್ತಗೊಳಿಸುವ ಉದ್ದೇಶದಿಂದ ಉಜ್ವಲಾ ಯೋಜನೆಯನ್ನು ರೂಪಿಸಿದ್ದು, ಇದರ ಜನಪ್ರಿಯತೆಯ ಕಾರಣ ಫಲಾನುಭವಿಗಳ ಸಂಖ್ಯೆಯನ್ನು 8 ಕೋಟಿಗೆ ಏರಿಸಲಾಗಿದೆ ಎಂದರು.

ಸಾವಯವ ಕೃಷಿಗೆ ಉತ್ತೇಜನ ನೀಡಲು ಮಹಿಳಾ ಸ್ವಸಹಾಯ ಸಂಘಗಳಿಗೆ ರಾಷ್ಟ್ರೀಯ ಗ್ರಾಮೀಣ ಜೀವನೋಪಯೋಗ ಕಾರ್ಯಕ್ರಮದ ಅಡಿಯಲ್ಲಿ ನೀಡುವ ಸಾಲ ಸೌಲಭ್ಯ ಮಾರ್ಚ್‌ 2019ರ ಹೊತ್ತಿಗೆ ₹75,000 ಕೋಟಿಯಷ್ಟು ಹೆಚ್ಚಾಗಲಿದೆ ಎಂದು ಹೇಳಿದರು.‌

ಹೆಣ್ಣುಮಕ್ಕಳಿಗಾಗಿ ಆರಂಭಿಸಿರುವ ‘ಬೇಟಿ ಬಚಾವೊ ಬೇಟಿ ಪಡಾವೊ’ ಯೋಜನೆಗೆ ಸರ್ಕಾರ ಬದ್ಧವಾಗಿದೆ. 2015ರಲ್ಲಿ ಜಾರಿಗೆ ತಂದಿರುವ ‘ಸುಕನ್ಯಾ ಸಮೃದ್ಧಿ ಖಾತೆ’ ಯೋಜನೆ ಭಾರಿ ಯಶಸ್ಸು ಕಂಡಿದೆ ಎಂದು ವಿವರಿಸಿದ್ದಾರೆ.

ನವೆಂಬರ್‌ 2017ರ ವರೆಗೆ ಈ ಯೋಜನೆಯ ಅಡಿಯಲ್ಲಿ ದೇಶದಾದ್ಯಂತ 1.26ಕೋಟಿಗೂ ಹೆಚ್ಚು ಖಾತೆಗಳನ್ನು ಹೆಣ್ಣು ಮಕ್ಕಳ ಹೆಸರಿನಲ್ಲಿ ತೆರೆಯಲಾಗಿದೆ ಎಂದು ಜೇಟ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT