ಒಂದೇ ಕಡೆ ಸಮಗ್ರ ಔಷಧ ಪದ್ಧತಿ–ಕೇಂದ್ರ ಚಿಂತನೆ

7
ತಲಪಾಡಿ ದೇವಿನಗರದಲ್ಲಿ ಶಾರದಾ ಆಯುರ್ವೇದ ಆಸ್ಪತ್ರೆ ಉದ್ಘಾಟನೆ

ಒಂದೇ ಕಡೆ ಸಮಗ್ರ ಔಷಧ ಪದ್ಧತಿ–ಕೇಂದ್ರ ಚಿಂತನೆ

Published:
Updated:

ಉಳ್ಳಾಲ: ‘ಸಮಗ್ರ ಔಷಧ ಪದ್ಧತಿ ಜನರಿಗೆ ಒಂದೇ ಕಡೆ ಸಿಗುವಂತಹ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಜನರಿಗೆ ಉಪಯುಕ್ತವಾಗುವ ಉದ್ದೇಶದಿಂದ ಇಂತಹ ಕೇಂದ್ರಗಳ ಸ್ಥಾಪನೆಗೆ ಆಯುಷ್ ಸಚಿವಾಲಯ ಹೆಚ್ಚಿನ ಒತ್ತು ನೀಡಲಿದೆ’ ಎಂದು ಕೇಂದ್ರ ಆಯುಷ್ ಸಚಿವ ಶ್ರೀಪಾದ್ ಎಸ್ಸೋ ನಾಯಕ್ ಹೇಳಿದರು.

ತಲಪಾಡಿ ದೇವಿನಗರದಲ್ಲಿ ಭಾನುವಾರ ತುಳುನಾಡು ಎಜುಕೇಶನ್ ಟ್ರಸ್ಟ್ ವತಿಯಿಂದ ನಿರ್ಮಾಣಗೊಂಡ ಶಾರದಾ ಆಯುರ್ವೇದ ಆಸ್ಪತ್ರೆ ಉದ್ಘಾಟಿಸಿ ಅವರು ಮಾತನಾಡಿದರು.

‘ಆಯುಷ್ ಸಚಿವಾಲಯದಿಂದ ಕಡ್ಡಾಯ ನೀತಿಗಳನ್ನು ಜಾರಿಗೊಳಿಸಲಾಗಿದ್ದು, ಆಯುಷ್ ಸರ್ಕಾರಿ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಆಧುನಿಕ ತಂತ್ರಜ್ಞಾನಗಳ ಸ್ಥಾಪನೆ ಹಾಗೂ ಸಿಬ್ಬಂದಿ ಮತ್ತು ಸಿಬ್ಬಂದಿಯೇತರರಿಗೆ ಕಡ್ಡಾಯ ಹಾಜರುವಿಕೆಗಾಗಿ ಬಯೋಮೆಟ್ರಿಕ್ ವ್ಯವಸ್ಥೆ ಸೇರಿದಂತೆ ಜನರಿಗೆ ಅನುಕೂಲಕರ ಸೇವೆ ಒದಗಿಸುವ ಸಲುವಾಗಿ ಆಧುನಿಕ ಸಲಕರಣೆಗಳ ವ್ಯವಸ್ಥೆಯನ್ನು ಪೂರೈಸಲಾಗಿದೆ’ ಎಂದರು.

200 ಹಾಸಿಗೆಗಳ ಅತ್ಯಾಧುನಿಕ ಆಸ್ಪತ್ರೆ ಇದಾಗಿದ್ದು, ಪಂಚಕರ್ಮ, ಯೋಗ, ಪ್ರತ್ಯಾಹಾರ ಫಿಸಿಯೊಥೆರಪಿ ಕೇಂದ್ರ ಸಹಿತ ಹಲವು ಸೌಲಭ್ಯಗಳಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !