ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯರಿಗೆ ಶ್ರೀನಿವಾಸ ದೇವರ ಶೇಷವಸ್ತ್ರ ಸಮರ್ಪಣೆ

Last Updated 17 ಆಗಸ್ಟ್ 2019, 12:43 IST
ಅಕ್ಷರ ಗಾತ್ರ

ಮಂತ್ರಾಲಯ: ಕಾಮಧೇನು ಕಲ್ಪವೃಕ್ಷ ಶ್ರೀ ಗುರು ಸಾರ್ವಭೌಮರ 348ನೇ ಆರಾಧನಾ ಮಹೋತ್ಸವವು ಸಂಭ್ರಮ, ಸಡಗರದೊಂದಿಗೆ ನಡೆಯುತ್ತಿದ್ದು, ಶನಿವಾರ ಮಧ್ಯಾರಾಧನೆಯಂದು ವಿಶೇಷ ಪೂಜಾ ವಿಧಿ ವಿಧಾನಗಳು ಜರಗಿದವು.

ತಿರುಪತಿ ತಿರುಮಲದಿಂದ ತರಲಾಗಿದ್ದ ಶ್ರೀನಿವಾಸ ದೇವರ ಶೇಷವಸ್ತ್ರವನ್ನು ವಾಧ್ಯವೈಭವ, ಮೆರವಣಿಗೆಯೊಂದಿಗೆ ಬರಮಾಡಿಕೊಳ್ಳಲಾಯಿತು. ಟಿಟಿಡಿ ಆಡಳಿತಾಧಿಕಾರಿಯು ಶೇಷವಸ್ತ್ರವನ್ನು ತಲೆ ಮೇಲೆ ಹೊತ್ತು ಮಠದ ಪ್ರಕಾರದಲ್ಲಿ ಪ್ರದಕ್ಷಣೆ ಮಾಡಿದರು. ಆನಂತರ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಶೇಷವಸ್ತ್ರವನ್ನು ಬರಮಾಡಿಕೊಂಡು, ತಲೆಮೇಲಿಟ್ಟುಕೊಂಡು ರಾಯರ ಸನ್ನಿಧಿಗೆ ತೆಗೆದುಕೊಂಡು ಹೋದರು.

ಮೂಲವೃಂದಾವನಕ್ಕೆ ಪಂಚಾಮೃತ ಅಭಿಷೇಕ ನೆರವೇರಿಸಿ, ಫಲ, ಪುಷ್ಪಗಳಿಂದ ಅಲಂಕಾರ ಮಾಡಲಾಯಿತು. ಮಠದೊಳಗೆ ಹಾಗೂ ಮಠದ ಪ್ರಾಕಾರದಲ್ಲಿ ಭಕ್ತಸಮೂಹವು ಕುಳಿತು ಅಭಿಷೇಕ ನೆರವೇರಿಸುವ ದೃಶ್ಯಾವಳಿಗಳನ್ನು ಕಣ್ತುಂಬಿಕೊಂಡರು. ಸುವರ್ಣ ರಥದಲ್ಲಿ ರಾಯರ ಪ್ರಭಾವಳಿಯನ್ನಿರಿಸಿ ಪ್ರಾಕಾರದಲ್ಲಿ ರಥೋತ್ಸವ ನಡೆಸಲಾಯಿತು. ಚಂಡಿ, ಮದ್ದಳೆ ವಾದ್ಯ ವೈಭವವು ಆರಾಧನಾ ಮಹೋತ್ಸವದ ಸಂಭ್ರಮವನ್ನು ಹೆಚ್ಚಿಸಿವೆ.

ನಾಡಿನ ವಿವಿಧೆಡೆಯಿಂದ ಭಕ್ತರು ರಾಯರ ದರ್ಶನಕ್ಕಾಗಿ ನಿರಂತರವಾಗಿ ಬರುತ್ತಿದ್ದಾರೆ. ಚಲನಚಿತ್ರ ನಟರಾದ ಜಗ್ಗೇಶ್‌ ಹಾಗೂ ಕೋಮಲ್‌ ಅವರು ರಾಯರ ದರ್ಶನ ಪಡೆದರು.

ಮಹಾರಥೋತ್ಸವ ನಾಳೆ:ರಾಯರ ಆರಾಧನಾ ಮಹೋತ್ಸವದ ಉತ್ತರಾರಾಧನೆ ದಿನದಂದು ಭಾನುವಾರ ಮಹಾರಥೋತ್ಸವ ನಡೆಯುವುದು.

ಮಠದಿಂದ ಮುಖ್ಯರಸ್ತೆವರೆಗೂ ರಥೋತ್ಸವ ಸಾಗಲಿದ್ದು, ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಸುತ್ತಮುತ್ತಲಿನ ಗ್ರಾಮಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ನೆರೆಯುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT