ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಹರಡುವ ಭೀತಿ: ಇನ್ಮುಂದೆ ಪಾಳಿಯಲ್ಲಿ ಶಾಲೆ?

Last Updated 15 ಮೇ 2020, 20:06 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಸೋಂಕು ಹರಡುವ ಭೀತಿ ಇರುವುದರಿಂದ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಅಂತರ ಕಾಯ್ದುಕೊಂಡೇ ಶಾಲೆ ನಡೆಸಬೇಕಾಗುತ್ತದೆ. ಹೀಗಾಗಿ ಪಾಳಿಯಲ್ಲಿ ತರಗತಿಗಳನ್ನು ನಡೆಸುವ ಸಂಬಂಧ ಸಿದ್ಧತೆ ಮಾಡಿಕೊಳ್ಳಲು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರು ಸೂಚನೆ ನೀಡಿದ್ದಾರೆ.

ಮೊದಲ ಪಾಳಿ ಬೆಳಿಗ್ಗೆ 7.50ರಿಂದ ಮಧ್ಯಾಹ್ನ 12.20ರವರೆಗೆ ಹಾಗೂ ಎರಡನೇ ಪಾಳಿ ಮಧ್ಯಾಹ್ನ 12.10ರಿಂದ ಸಂಜೆ 5 ಗಂಟೆಯವರೆಗೆ ನಡೆಸಬಹುದು ಎಂಬ ಸಲಹೆ ನೀಡಿದ್ದಾರೆ. ಜತೆಗೆ ಪಾಳಿಯಲ್ಲಿ ಯಾವ ತರಗತಿಗಳನ್ನು ನಡೆಸಬಹುದು ಎಂಬ ವೇಳಾಪಟ್ಟಿಯನ್ನು ಸಹ ನೀಡಲಾಗಿದೆ.

ಪ್ರಸ್ತುತ ವಾರಕ್ಕೆ 45 ತರಗತಿಗಳನ್ನು ನಡೆಸಲಾಗುತ್ತದೆ. ಅದನ್ನು 36ಕ್ಕೆ ಇಳಿಸಬಹುದು. ಕೆಲವೆಡೆ ಮುಚ್ಚಿದ ಶಾಲೆಗಳು, ಇನ್ನು ಕೆಲವೆಡೆ ಮಧ್ಯಾಹ್ನದ ಬಳಿಕ ಅಂಗನವಾಡಿಗಳನ್ನು ಬಳಸಿಕೊಳ್ಳಬಹುದು. ಗ್ರಾಮೀಣ ಪ್ರದೇಶಗಳಲ್ಲಿ ಬೆಳಿಗ್ಗೆ ಉಪಾಹಾರ ವಿತರಣೆ ಕಷ್ಟವಾದರೆ ಪಾಳಿ ಸಮಯದಲ್ಲಿ ಬದಲಾವಣೆ ಮಾಡಬಹುದು. ಕೊಠಡಿಗಳು, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಲಭ್ಯತೆಯ ಆಧಾರದಲ್ಲಿ ಆಯಾ ಜಿಲ್ಲಾಡಳಿತಗಳು ಸೂಕ್ತ ಬದಲಾವಣೆ ಮಾಡಿಕೊಂಡು ತರಗತಿ ನಡೆಸಬಹುದು. ಆದರೆ ಮಕ್ಕಳ ಮಧ್ಯೆ ಅಂತರ ಕಾಪಾಡುವುದು ಬಹಳ ಮುಖ್ಯ ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT