ಮಂಗಳವಾರ, ಮಾರ್ಚ್ 2, 2021
23 °C

ಶಿರಾಡಿ ಘಾಟ್‌ ರಸ್ತೆ ಸಂಚಾರಕ್ಕೆ ಮುಕ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಹಾಸನ: ಭೂ ಕುಸಿತದಿಂದ ಬಂದ್ ಆಗಿರುವ ಹಾಸನ– ಮಂಗಳೂರು ನಡುವಿನ ಶಿರಾಡಿಘಾಟ್ ರಸ್ತೆಯಲ್ಲಿ ಲಘು ವಾಹನ ಸಂಚಾರ ಸೆ. 5ರ ಮಧ್ಯಾಹ್ನದಿಂದ ಆರಂಭವಾಗಲಿದೆ.

ಸತತ ಮಳೆಯಿಂದ ಹಲವು ಕಡೆ ಭೂ ಕುಸಿತ, ಗುಡ್ಡ ಕುಸಿದು ರಸ್ತೆಗಳು ಹಾಳಾಗಿವೆ. ತುರ್ತು ದುರಸ್ತಿ ಕಾರ್ಯ ನಡೆದಿದೆ. ಪರಿಣಿತರ ಸೂಚನೆ ಮೇರೆಗೆ ಲಘು ವಾಹನಗಳು ಸಂಚರಿಸಬಹುದು ಎಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಪತ್ರ ಬರೆದಿದ್ದಾರೆ. ಈ ಪತ್ರದ ಆಧಾರದ ಮೇಲೆ ಸಂಚಾರಕ್ಕೆ ಮುಕ್ತಗೊಳಿಸುವ ನಿರ್ಧಾರಕ್ಕೆ ಬರಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.

‘ಮಂಗಳೂರು ಜಿಲ್ಲಾಧಿಕಾರಿ ಜತೆ ಚರ್ಚಿಸಿ ಮಧ್ಯಾಹ್ನದ ಬಳಿಕ ಆದೇಶ ಹೊರಡಿಸಲಾಗುವುದು. ಸಂಚಾರದ ವೇಳೆ ಯಾವುದೇ ಅನಾಹುತ ಸಂಭವಿಸಿದರೂ ಅದಕ್ಕೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೇ ಹೊಣೆ’ ಎಂದು ಅವರು ಎಚ್ಚರಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.