ಶನಿವಾರ, ಫೆಬ್ರವರಿ 29, 2020
19 °C

ಶಿವಸೇನಾ ನಾಯಕ ಸಂಜಯ್ ರಾವತ್ ಭೇಟಿ ಹಿನ್ನೆಲೆ: ಬೆಳಗಾವಿಯಲ್ಲಿ ಪೊಲೀಸ್‌ ಸರ್ಪಗಾವಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಶಿವಸೇನಾ ನಾಯಕ ಸಂಜಯ್ ರಾವತ್ ಭೇಟಿ ಸಂಭವ ಇರುವುದರಿಂದ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ನಗರ ಪ್ರವೇಶಿಸುವ ದ್ವಾರಗಳಲ್ಲಿ, ಕಿತ್ತೂರು ರಾಣಿ ಚನ್ನಮ್ಮ ವೃತ್ತ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳವಾದ ಗೋಗಟೆ ರಂಗಮಂದಿರದ ಬಳಿ ಪೊಲೀಸ್ ಬಂದೋಬಸ್ತ್ ಬಿಗಿಗೊಳಿಸಲಾಗಿದೆ.

ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಆಯೋಜಿಸಿದ್ದ ಹುತಾತ್ಮ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಹಾರಾಷ್ಟ್ರದ ಸಚಿವ ರಾಜೇಂದ್ರ ಪಾಟೀಲ ಅವರನ್ನು ಪೊಲೀಸರು ವಶಕ್ಕೆ ಪಡೆದು, ಗಡಿ ದಾಟಿಸಿ ಬಂದಿದ್ದರು. ಇದನ್ನು ಖಂಡಿಸಿದ್ದ ರಾವತ್, 'ಶನಿವಾರ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಹೋಗ್ತೀನಿ, ಏನಾಗುತ್ತದೆಯೋ ನೋಡೋಣ' ಎಂದು ಹೇಳಿಕೆ ನೀಡಿದ್ದರು.

ಎಂಇಎಸ್ ಮುಖಂಡರು ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದರಲ್ಲಿ ಪಾಲ್ಗೊಳ್ಳಲು ರಾವತ್ ಬರುವ ಸಂಭವವಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು