ಮಂಗಳವಾರ, ನವೆಂಬರ್ 19, 2019
29 °C

ನಾಗಾಭರಣಗೆ ಶಿವಕುಮಾರ ಪ್ರಶಸ್ತಿ

Published:
Updated:
Prajavani

ಚಿತ್ರದುರ್ಗ: ಹೊಸದುರ್ಗ ತಾಲ್ಲೂಕು ಸಾಣೇಹಳ್ಳಿಯ ಶಿವಕುಮಾರ ಕಲಾ ಸಂಘ ಪ್ರದಾನ ಮಾಡುವ ಶಿವಕುಮಾರ ಪ್ರಶಸ್ತಿಗೆ ಸಿನಿಮಾ ನಿರ್ದೇಶಕ ಟಿ.ಎಸ್. ನಾಗಾಭರಣ ಆಯ್ಕೆಯಾಗಿದ್ದಾರೆ.

ರಂಗಭೂಮಿಗೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.

ಪ್ರಶಸ್ತಿಯು ₹ 50 ಸಾವಿರ ನಗದು ಹಾಗೂ ಫಲಕ ಒಳಗೊಂಡಿರುತ್ತದೆ. ನ. 7ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)