ಸಿದ್ಧಗಂಗಾ ಶ್ರೀ ಚೇತರಿಕೆ

7

ಸಿದ್ಧಗಂಗಾ ಶ್ರೀ ಚೇತರಿಕೆ

Published:
Updated:
Prajavani

ತುಮಕೂರು: ‘ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯ ಸ್ಥಿರವಾಗಿದೆ. ಆತಂಕಕ್ಕೆ ಒಳಗಾಗಬೇಕಾಗಿಲ್ಲ’ ಎಂದು ಸಿದ್ಧಗಂಗಾ ಮಠದ ಅಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಮಂಗಳವಾರ ತಿಳಿಸಿದರು.

ವದಂತಿಗಳಿಗೆ ತೆರೆ ಎಳೆಯಲು ಶಿವಕುಮಾರ ಸ್ವಾಮೀಜಿ ಅವರ ಚಿತ್ರ ಮತ್ತು ವಿಡಿಯೊವನ್ನು ಮಠದಿಂದ ಬಿಡುಗಡೆ ಮಾಡಲಾಗಿದೆ. ಚಿಕಿತ್ಸೆ ಉಸ್ತುವಾರಿ ವಹಿಸಿರುವ ಸಿದ್ಧಗಂಗಾ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಪರಮೇಶ್ ಹಾಗೂ ಗೃಹ ಸಚಿವ ಎಂ.ಬಿ.ಪಾಟೀಲ್ ಕೂಡ ಇದೇ ಮಾತನ್ನು ಹೇಳಿದ್ದಾರೆ.

ಬೆಳಿಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಡಾ.ಪರಮೇಶ್, ‘ಸೋಮವಾರಕ್ಕಿಂತ ಮಂಗಳವಾರ ಉತ್ತಮವಾಗಿ ಚೇತರಿಸಿಕೊಂಡಿದ್ದಾರೆ ಎಂದು ತಿಳಿಸಿದರು.ಮುಂಜಾನೆಯೇ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಸಹ ಮಠಕ್ಕೆ ಬಂದಿದ್ದರು. ‘ಶಿವಕುಮಾರ ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ನಾನು ಹೋದಾಗ ಅವರು ಮಲಗಿದ್ದರು’ ಎಂದರು.

ಬರಹ ಇಷ್ಟವಾಯಿತೆ?

  • 4

    Happy
  • 0

    Amused
  • 0

    Sad
  • 0

    Frustrated
  • 1

    Angry

Comments:

0 comments

Write the first review for this !